ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳಿಗೆ ಹೊಸದಾಗಿ ನೇಮಕಗೊಂಡ 71,000 ಉದ್ಯೋಗಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳಿಗೆ ಹೊಸದಾಗಿ ನೇಮಕಗೊಂಡ 71,000 ಉದ್ಯೋಗಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮವು ದೇಶದ 45 ಕಡೆಗಳಲ್ಲಿ ನಡೆಯಲಿದ್ದು, ಈ ವೇಳೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ದೇಶದ ಯುವಕರಿಗೆ ಉದ್ಯೋಗ ಒದಗಿಸುವ ರೋಜ್‌ಗಾರ್ ಮೇಳದ ಅಡಿಯಲ್ಲಿ ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಹಣಕಾಸು ಸೇವೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಹಾಗೂ ಇಲಾಖೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಎಂದು ಪ್ರಧಾನಿಯವರ ಕಚೇರಿ ಮಾಹಿತಿ ನೀಡಿದೆ.