ಸಾರಾಂಶ
18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾಯಿತವಾದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜು.22ರಂದು ತನ್ನ ಮೊದಲ ಆಯವ್ಯಯ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾಯಿತವಾದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜು.22ರಂದು ತನ್ನ ಮೊದಲ ಆಯವ್ಯಯ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ಜು.22ರಿಂದ ಆ.9ರವರೆಗೆ ಮುಂಗಾರು ಅಧಿವೇಶನ ಜರುಗಲಿದ್ದು, ಮೊದಲ ದಿನ (ಜು.22) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಯವ್ಯಯ ಮಂಡಿಸುವ ಮೂಲಕ 7ನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆಗೆ ಪಾತ್ರರಾಗಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಜು.3ರಂದು ಆರ್ಥಿಕ ಸಮೀಕ್ಷೆ ಪ್ರಕಟಿಸುವ ಸಾಧ್ಯತೆಯಿದೆ ಎಂದು ಅವು ಹೇಳಿವೆ.
ಕಳೆದ ಫೆ.1ರಂದು ನಿರ್ಮಲಾ ಚುನಾವಣೆಗೂ ಮುನ್ನ ಲೇಖಾನುದಾನದ ಅನುಮೋದನೆಗಾಗಿ ಮಧ್ಯಂತರ ಬಜೆಟ್ ಮಂಡಿಸಿದ್ದರು. ಹೊಸ ಚುನಾಯಿತ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ ಎಂದಿದ್ದರು.