ಸಾರಾಂಶ
ಕೊಚ್ಚಿ: ಕೇರಳದ ಕಲಮಸ್ಸೇರಿಯಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್‌ಎಂಟಿ) ಕಾರ್ಖಾನೆಗೆ ಸೋಮವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಎಲ್ಲಾ ವಿಭಾಗಳಿಗೆ ಖುದ್ದು ಭೇಟಿ ನೀಡಿ ವೀಕ್ಷಿಸಿ, ಉತ್ಪಾದನೆ, ಬೇಡಿಕೆ ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಭವಿಷ್ಯದ ಯೋಜನೆಗಳ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಕಾರ್ಖಾನೆಯ ಯಂತ್ರೋಪಕರಣಗಳ ಕ್ಷಮತೆ, ಕಾರ್ಮಿಕರ ಸ್ಥಿತಿಗತಿಗಳು, ಆಡಳಿತ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು. ಕಾರ್ಮಿಕರ ಜತೆ ಸಂವಾದ ನಡೆಸಿದರು. ಬಳಿಕ ಕಾರ್ಮಿಕ ಸಂಘಟನೆಗಳ ಮುಖಂಡರ ಅಹವಾಲು ಆಲಿಸಿದರು. ಅಲ್ಲಿನ ಮಹಿಳಾ ಉದ್ಯೋಗಿಗಳು ಸಚಿವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದರು.
ಭಾರತದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾಗಿದ್ದ ಹೆಚ್ ಎಂಟಿ ಕಾರ್ಖಾನೆಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪ್ರಧಾನಿಗಳ ಮಾರ್ಗದರ್ಶನದಲ್ಲಿ ಎಲ್ಲಾ ರೀತಿಯ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ. ಈಗಾಗಲೇ ನಾನು ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿರುವ ಹೆಚ್ ಎಂಟಿ ಘಟಕಗಳಿಗೆ ಭೇಟಿ ನೀಡಿದ್ದೇನೆ.
- ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ
)
)
;Resize=(128,128))
;Resize=(128,128))
;Resize=(128,128))
;Resize=(128,128))