ಸಾರಾಂಶ
ಲೋಕಸಭೆಗೆ ಮೇ 26ರಂದು ಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅಂದು ನಿಗದಿಯಾಗಿದ್ದ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆಯನ್ನು ಜೂ.16ಕ್ಕೆ ಮುಂದೂಡಲಾಗಿದೆ.
ನವದೆಹಲಿ: ಲೋಕಸಭೆಗೆ ಮೇ 26ರಂದು ಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅಂದು ನಿಗದಿಯಾಗಿದ್ದ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆಯನ್ನು ಜೂ.16ಕ್ಕೆ ಮುಂದೂಡಲಾಗಿದೆ. ಈ ಕುರಿತು ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಪ್ರಕಟಣೆ ಹೊರಡಿಸಿದೆ. ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ನಾಗರಿಕ ಸೇವಾ ಹುದ್ದೆಗಳಿಗೆ ಅರ್ಹರನ್ನು ನೇಮಕ ಮಾಡಲು ಪ್ರತಿವರ್ಷ ಯುಪಿಎಸ್‌ಸಿ ವಿವಿಧ ಹಂತದ ಪರೀಕ್ಷೆಗಳನ್ನು ಆಯೋಜಿಸುತ್ತದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕ ಮುಂದೂಡಲಾಗಿದೆ.