ಸಾರಾಂಶ
ಬೆಂಗಳೂರಿನಲ್ಲಿ ಮುಂದಿನ ತಿಂಗಳಿನಿಂದ ಅಮೆರಿಕ ಕಾನ್ಸುಲೇಟ್ ಕಚೇರಿ ಆರಂಭವಾಗಲಿದೆ. ಕಚೇರಿ ಆರಂಭಿಸುವ ನಿಟ್ಟಿನಲ್ಲಿ ಅಮೆರಿಕ ಕಾರ್ಯನಿರತವಾಗಿದೆ ಎಂದು ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ.
ನವದೆಹಲಿ : ಬೆಂಗಳೂರಿನಲ್ಲಿ ಮುಂದಿನ ತಿಂಗಳಿನಿಂದ ಅಮೆರಿಕ ಕಾನ್ಸುಲೇಟ್ ಕಚೇರಿ ಆರಂಭವಾಗಲಿದೆ. ಕಚೇರಿ ಆರಂಭಿಸುವ ನಿಟ್ಟಿನಲ್ಲಿ ಅಮೆರಿಕ ಕಾರ್ಯನಿರತವಾಗಿದೆ ಎಂದು ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ.
ಅಮೆರಿಕ ಮತ್ತು ಭಾರತ ಬಿಸಿನೆಸ್ ಕೌನ್ಸಿಲ್ (ಯುಎಸ್‌ಐಬಿಸಿ) ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ದೂತವಾಸ ಕಚೇರಿಯನ್ನು ಹೊಂದಿರದ ಏಕೈಕ ದೇಶ ಅಮೆರಿಕವಾಗಿತ್ತು, ಆದರೆ ಈಗ ಕಚೇರಿ ಸ್ಥಾಪನೆಗೆ ನಾವು ಈ ಬಗ್ಗೆ ಶ್ರಮಿಸುತ್ತಿದ್ದೇವೆ. ಶೀಘ್ರದಲ್ಲಿಯೇ ಒಳ್ಳೆಯ ಸುದ್ದಿಗಳನ್ನು ಘೋಷಿಸುತ್ತೇವೆ’ ಎಂದರು.
‘ನಾವು ಬೆಂಗಳೂರಿನಲ್ಲಿ ಈಗಾಗಲೇ ವಿದೇಶಿ ವಾಣಿಜ್ಯವನ್ನು ಹೊಂದಿದ್ದೇವೆ. ನಮ್ಮ ಬದ್ಧತೆಯಂತೆ ಜನವರಿಯಲ್ಲಿ ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿಯನ್ನು ತೆರೆಯುವುದನ್ನು ಎದುರು ನೋಡುತ್ತಿದ್ದೇವೆ’ ಎಂದೂ ಹೇಳಿದರು.
ಅಮೆರಿಕ ಈ ಹಿಂದೆಯೇ ಅಹಮದಾಬಾದ್ ಮತ್ತು ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿಯನ್ನು ಪ್ರಾರಂಭಿಸುವುದಾಗಿ ಘೋಷಿಸಿತ್ತು. ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ.