ಜ್ಞಾನವಾಪಿಯಲ್ಲಿ ಪೂಜೆ ಖಂಡಿಸಿ ಮುಸ್ಲಿಮರಿಂದ ವಾರಾಣಸಿ ಬಂದ್‌

| Published : Feb 03 2024, 01:46 AM IST

ಸಾರಾಂಶ

ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ವಾರಾಣಸಿ ನಗರದಲ್ಲಿ ಮುಸ್ಲಿಮರು ಬಂದ್‌ ಮಾಡಿದರು.

ವಾರಾಣಸಿ: ಕಾಶಿ ವಿಶ್ವನಾಥ ಮಂದಿರದ ಜ್ಞಾನವಾಪಿ ಮಸೀದಿಯಲ್ಲಿನ ತಳಮಹಡಿಯಲ್ಲಿನ ಹಿಂದೂ ದೇವರ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ್ದನ್ನು ಖಂಡಿಸಿ ಮುಸ್ಲಿಮರು ಶುಕ್ರವಾರ ವಾರಾಣಸಿ ಬಂದ್‌ ನಡೆಸಿದರು.

ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳು ಶುಕ್ರವಾರ ಮುಚ್ಚಿದ್ದವು. ಅಲ್ಲದೆ, ಭಾರಿ ಸಂಖ್ಯೆಯ ಮುಸ್ಲಿಮರು ಶುಕ್ರವಾರದ ನಮಾಜ್‌ಗೆ ಜ್ಞಾನವಾಪಿ ಮಸೀದಿಗೆ ಬಂದಿದ್ದರಿಂದ ಉದ್ವಿಗ್ನ ಸ್ಥಿತಿ ನೆಲೆಸಿತ್ತು. ಈ ಹಿನ್ನೆಲೆಯಲ್ಲಿ ವಾರಾಣಸಿಯಾದ್ಯಂತ ಭಾರಿ ಬಿಗಿ ಬಂದೋಬಸ್ತ್‌ ಹಮ್ಮಿಕೊಳ್ಳಲಾಗಿದೆ.