ಸಾರಾಂಶ
ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 20 ಕರಸೇವಕರ ಕುಟುಂಬಗಳಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಭಾಗವಹಿಸುವಂತೆ ಆಹ್ವಾನ ನೀಡಿರುವುದಾಗಿ ವಿಶ್ವ ಹಿಂದೂ ಪರಿಷತ್ ತಿಳಿಸಿದೆ.
ಅಯೋಧ್ಯೆ: 2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡದಲ್ಲಿ ಮಡಿದಿದ್ದ ಅಯೋಧ್ಯಾ ಕರಸೇವಕರ ಕುಟುಂಬ ಸದಸ್ಯರಿಗೂ ಮಂದಿರ ಪ್ರಾಣಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ವಿಶ್ವ ಹಿಂದೂ ಪರಿಷತ್ ಮೂಲಗಳು, ‘ಗೋಧ್ರಾ ಹತ್ಯಾಕಾಂಡದಲ್ಲಿ ವೀರಮರಣ ಹೊಂದಿದ್ದ 39 ಕರಸೇವಕರ ಪೈಕಿ 20 ಕರಸೇವಕರ ಕುಟುಂಬದ ವಿಳಾಸವನ್ನು ಪತ್ತೆಹಚ್ಚಿ ಅವರಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಬರುವಂತೆ ಆಹ್ವಾನ ನೀಡಲಾಗಿದೆ.ಈ ಪೈಕಿ 19 ಮಂದಿ ಕಾರ್ಯಕ್ರಮಕ್ಕೆ ಬರುವುದನ್ನು ಖಚಿತಪಡಿಸಿದ್ದಾರೆ’ ಎಂದು ತಿಳಿಸಿದೆ.