ನಿರ್ದಿಷ್ಟ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ತಮ್ಮ ವಿಡಿಯೋ ನಕಲಿ ಎಂದು ಖ್ಯಾತ ನಟ ಅಮೀರ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ನಿರ್ದಿಷ್ಟ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ತಮ್ಮ ವಿಡಿಯೋ ನಕಲಿ ಎಂದು ಖ್ಯಾತ ನಟ ಅಮೀರ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅಮೀರ್‌ ಪರ ವಕ್ತಾರರು, ‘ತಮ್ಮ 35 ವರ್ಷಗಳ ಚಿತ್ರರಂಗದ ವೃತ್ತಿ ಜೀವನದಲ್ಲಿ ಅಮೀರ್‌ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ 27 ಸೆಕೆಂಡ್‌ಗಳ ವಿಡಿಯೋ ತಯಾರಿಸಲಾಗಿದೆ. ಇದು ಸಂಪೂರ್ಣ ನಕಲಿ. ಈ ಕುರಿತು ಈಗಾಗಲೇ ಸೈಬರ್‌ ಕ್ರೈಮ್ ವಿಭಾಗದಕ್ಕೆ ದೂರು ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋದಲ್ಲಿ ಪರೋಕ್ಷವಾಗಿ ಬಿಜೆಪಿ ಮತ್ತು ಮೋದಿಯನ್ನು ಟೀಕಿಸುವ ಮತ್ತು ನೇರವಾಗಿ ಕಾಂಗ್ರೆಸ್‌ ಅನ್ನು ಬೆಂಬಲಿಸುವಂತೆ ಅಮೀರ್‌ ಕೋರಿಕೆ ಸಲ್ಲಿಸಿದ ಅಂಶಗಳಿವೆ.