ಸಾರಾಂಶ
ಭಾರತದ ಐಟಿ ರಾಜಧಾನಿನ ಬೆಂಗಳೂರಿನ ಸಮರ್ಪಕ ಮೂಲಸೌಕರ್ಯದ ಕೊರತೆ, ಟ್ರಾಫಿಕ್ ಸೇರಿದಂತೆ ಹತ್ತು ಹಲವು ಸಮಸ್ಯೆಗಳ ಅನ್ಯ ರಾಜ್ಯಗಳ ಐಟಿ ಉದ್ಯೋಗಿಗಳು ಜಾಲತಾಣದಲ್ಲಿ ಟೀಕೆ ಮಾಡುತ್ತಿರುವ ಹೊತ್ತಿನಲ್ಲೇ, ರಾಜ್ಯದ ಅವ್ಯವಸ್ಥೆಯಿಂದಾಗಿ ಐಟಿ ಕಂಪನಿಗಳು ಬೆಂಗಳೂರಿನತ್ತ ವಲಸೆ ಹೋಗುತ್ತಿವೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೋಳಿಟ್ಟುಕೊಂಡಿದ್ದಾರೆ.
ಪುಣೆ ಅವ್ಯವಸ್ಥೆ ಬಗ್ಗೆ ಪವಾರ್ ಕೆಂಡಾಮಂಡಲ
ಪುಣೆ: ಭಾರತದ ಐಟಿ ರಾಜಧಾನಿನ ಬೆಂಗಳೂರಿನ ಸಮರ್ಪಕ ಮೂಲಸೌಕರ್ಯದ ಕೊರತೆ, ಟ್ರಾಫಿಕ್ ಸೇರಿದಂತೆ ಹತ್ತು ಹಲವು ಸಮಸ್ಯೆಗಳ ಅನ್ಯ ರಾಜ್ಯಗಳ ಐಟಿ ಉದ್ಯೋಗಿಗಳು ಜಾಲತಾಣದಲ್ಲಿ ಟೀಕೆ ಮಾಡುತ್ತಿರುವ ಹೊತ್ತಿನಲ್ಲೇ, ರಾಜ್ಯದ ಅವ್ಯವಸ್ಥೆಯಿಂದಾಗಿ ಐಟಿ ಕಂಪನಿಗಳು ಬೆಂಗಳೂರಿನತ್ತ ವಲಸೆ ಹೋಗುತ್ತಿವೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೋಳಿಟ್ಟುಕೊಂಡಿದ್ದಾರೆ.ಪಿಂಪ್ರಿ ಚಿಂಚ್ವಾಡದಲ್ಲಿ ರಸ್ತೆ, ಚರಂಡಿಗಳಲ್ಲಿ ನೀರುನಿಲ್ಲುವಿಕೆ ಸೇರಿದಂತೆ ಮೂಲಸೌಕರ್ಯಗಳ ಸಮಸ್ಯೆ ಪರಿಶೀಲನೆಗೆ ಬೆಳ್ಳಂಬೆಳಗ್ಗೆ ತೆರಳಿದ್ದ ವೇಳೆ ಕೋಪಗೊಂಡ ಅಜಿತ್, ‘ನಾವು ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದೇವೆ. ಹಿಂಜವಾಡಿ ಐಟಿ ಪಾರ್ಕ್ ಪುಣೆಯಿಂದಷ್ಟೇ ಏಕೆ, ಮಹಾರಾಷ್ಟ್ರದಿಂದಲೇ ಹೊರಹೋಗಿ, ಬೆಂಗಳೂರು, ಹೈದರಾಬಾದ್‌ನಲ್ಲಿ ನೆಲೆಸುತ್ತಿದೆ. ನಿಮಗ್ಯಾರಿಗೂ ಚಿಂತೆಯೇ ಇಲ್ಲವೇ’ ಎಂದು, ಸರಪಂಚ್ ಗಣೇಶ್ ಜಂಭುಲ್ಕರ್ ಅವರೆದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂಜವಾಡಿಯಲ್ಲಿ 2,800 ಎಕರೆ ವ್ಯಾಪ್ತಿಯಲ್ಲಿ ರಾಜೀವ್ ಗಾಂಧಿ ಟೆಕ್ ಪಾರ್ಕ್ ಇದ್ದು, ಅಲ್ಲಿ 800ಕ್ಕೂ ಅಧಿಕ ಕಂಪನಿಗಳ ಕಚೇರಿಗಳಿವೆ. ಅವುಗಳೆಲ್ಲ ಈಗ ಬೇರೆ ರಾಜ್ಯದ ಮಹಾನಗರಗಳಿಗೆ ಸ್ಥಳಾಂತರಗೊಳ್ಳುತ್ತಿರುವುದು ಅಜಿತ್ ಅಸಮಾಧಾನಕ್ಕೆ ಕಾರಣವಾಗಿದೆ.