ಉನ್ನತ ಮಟ್ಟದ ಸಭೆ ನಡೆಸಿ ಪ್ರಧಾನಿ ಚರ್ಚೆಇಂಧನ ವಲಯದ ಪರಿಸ್ಥಿತಿ ಬಗ್ಗೆ ಮಾಹಿತಿಎಲ್‌ಪಿಜಿ, ಪೆಟ್ರೋಲಿಯಂ ಪೂರೈಕೆಗೆ ಒತ್ತುರಸಗೊಬ್ಬರ, ವಿದ್ಯುತ್ ಕ್ಷೇತ್ರಕ್ಕೂ ಆದ್ಯತೆ
ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಾದ್ಯಂತ ತೈಲ ಹಾಗೂ ಅನಿಲಕ್ಕೆ ತತ್ವಾರ ಎದುರಾಗಿರುವ ನಡುವೆಯೇ, ಭಾರತದಲ್ಲಿ ತೈಲ, ಅನಿಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ನಿರಂತರ ಪೂರೈಕೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಿರಿಯ ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ವೇಳೆ ತಡೆರಹಿತವಾಗಿ ಎಲ್‌ಪಿಜಿ ಪೂರೈಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯತಂತ್ರವನ್ನು ರೂಪಿಸಲಾಗಿದೆ.ದೇಶದಲ್ಲಿ ಯಾವುದೇ ತಡೆಯಿಲ್ಲದೆ ಇಂಧನ, ಎಲ್‌ಪಿಜಿ ಹಾಗೂ ಇತರ ಸರಕುಗಳನ್ನು ಒದಗಿಸುವುದನ್ನೇ ಕೇಂದ್ರ ವಿಷಯವಾಗಿಟ್ಟುಕೊಂಡು ಸಭೆ ನಡೆಸಲಾಗಿದೆ. ಕಚ್ಚಾತೈಲ, ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನ, ವಿದ್ಯುತ್ ಹಾಗೂ ಗೊಬ್ಬರ ವಲಯಗಳಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಮಾಹಿತಿ ಪಡೆದಿದ್ದಾರೆ. ಇವುಗಳ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಂಬಂಧಿತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.ಕೇಂದ್ರ ಬಂದರು ಮತ್ತು ಸಾಗಣೆ ಸಚಿವ ಸರ್ಬಾನಂದ ಸೋನೋವಾಲ್, ಇಂಧನ ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು, ಮತ್ತು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪ್ರಧಾನಿಯವರ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಪಿ. ಕೆ. ಮಿಶ್ರಾ ಮತ್ತು ಶಕ್ತಿಕಾಂತ ದಾಸ್ ಸಭೆಯಲ್ಲಿ ಉಪಸ್ಥಿತರಿದ್ದರು.ಎಲ್‌ಪಿಜಿ ತಡೆರಹಿತ ಪೂರೈಕೆಗೆ ಮೋದಿ ಕಾರ್ಯತಂತ್ರ
ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಾದ್ಯಂತ ತೈಲ ಹಾಗೂ ಅನಿಲಕ್ಕೆ ತತ್ವಾರ ಎದುರಾಗಿರುವ ನಡುವೆಯೇ, ಭಾರತದಲ್ಲಿ ತೈಲ, ಅನಿಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ನಿರಂತರ ಪೂರೈಕೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಿರಿಯ ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ವೇಳೆ ತಡೆರಹಿತವಾಗಿ ಎಲ್‌ಪಿಜಿ ಪೂರೈಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯತಂತ್ರವನ್ನು ರೂಪಿಸಲಾಗಿದೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.