ಕೈ ಸರ್ಕಾರ ಬಂದ ಬಳಿಕ ತೆರಿಗೆ ಭಯೋತ್ಪಾದಕರ ವಿರುದ್ಧ ಕ್ರಮ: ರಾಹುಲ್‌ ಗಾಂಧಿ

| Published : Mar 30 2024, 12:45 AM IST / Updated: Mar 30 2024, 09:15 AM IST

ಕೈ ಸರ್ಕಾರ ಬಂದ ಬಳಿಕ ತೆರಿಗೆ ಭಯೋತ್ಪಾದಕರ ವಿರುದ್ಧ ಕ್ರಮ: ರಾಹುಲ್‌ ಗಾಂಧಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಣಕಾಸು ತನಿಖೆ ಸಂಸ್ಥೆಗಳ ಮೂಲಕ ತೆರಿಗೆ ಭಯೋತ್ಪಾದನೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಚ್ಚರಿಸಿದ್ದಾರೆ.

ನವದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಣಕಾಸು ತನಿಖೆ ಸಂಸ್ಥೆಗಳ ಮೂಲಕ ತೆರಿಗೆ ಭಯೋತ್ಪಾದನೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಚ್ಚರಿಸಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆಯಿಂದ 1800 ಕೋಟಿ ರು. ಬಡ್ಡಿ ಮತ್ತು ದಂಡಶುಲ್ಕ ಪಾವತಿಸುವಂತೆ ಹೊಸ ನೋಟಿಸ್‌ ಬಂದಿರುವುದಕ್ಕೆ ಪ್ರತಿಕ್ರಿಯಿಸಿದ ರಾಹುಲ್‌, ‘ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲಾಗುತ್ತಿದೆ. 

ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮರುಕ್ಷಣವೇ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮುಂದೆಂದೂ ಅವರು ಈ ರೀತಿ ನಡೆದುಕೊಳ್ಳುವಂತೆ ನೋಡಿಕೊಳ್ಳಲಾಗುವುದು’ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಇದೇ ವೇಳೆ ತೆರಿಗೆ ನೋಟಿಸ್‌ ವಿರುದ್ಧ ಕಾಂಗ್ರೆಸ್‌ ಸುದೀರ್ಘ ಕಾನೂನು ಹೋರಾಟ ನಡೆಸಲಿದೆ ಎಂದು ರಾಹುಲ್‌ ಹೇಳಿದರು.