ಸಾರಾಂಶ
ಸಂಸತ್ತಿನಲ್ಲಿ ವಕ್ಫ್ ಮಸೂದೆ ತಿದ್ದುಪಡಿ ವಿಧೇಯಕ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳದ ಕೇರಳದ ವಯನಾಡು ಕ್ಷೇತ್ರದ ಹಾಲಿ ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಇದೇ ಕ್ಷೇತ್ರದ ಮಾಜಿ ಸಂಸದ ರಾಹುಲ್ ಗಾಂಧಿ ಬಗ್ಗೆ ಸ್ಥಳೀಯ ಪತ್ರಿಕೆಯೊಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ತಿರುವನಂತಪುರಂ: ಸಂಸತ್ತಿನಲ್ಲಿ ವಕ್ಫ್ ಮಸೂದೆ ತಿದ್ದುಪಡಿ ವಿಧೇಯಕ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳದ ಕೇರಳದ ವಯನಾಡು ಕ್ಷೇತ್ರದ ಹಾಲಿ ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಇದೇ ಕ್ಷೇತ್ರದ ಮಾಜಿ ಸಂಸದ ರಾಹುಲ್ ಗಾಂಧಿ ಬಗ್ಗೆ ಸ್ಥಳೀಯ ಪತ್ರಿಕೆಯೊಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
‘ ದೇಶದ ಜನರು ನಿರೀಕ್ಷೆಗಳನ್ನಿಟ್ಟುಕೊಂಡಿದ್ದ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಪಕ್ಷದ ವಿಪ್ ಉಲ್ಲಂಘಿಸಿ ಸದನಕ್ಕೆ ಗೈರಾಗಿದ್ದರು. ಅದು ಒಂದು ಕಳಂಕವಾಗಿ ಉಳಿಯುತ್ತದೆ. ಮಸೂದೆ ಚರ್ಚೆಯಾದಾಗ ಅವರು ಎಲ್ಲಿದ್ದರು ಎಂಬುದು ಶಾಶ್ವತವಾಗಿ ಉಳಿಯುತ್ತದೆ.
ಲೋಕಸಭೆ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ದೇಶದ ಏಕತೆಯನ್ನು ಛಿದ್ರಗೊಳಿಸುವ ಮಸೂದೆ ಬಗ್ಗೆ ಮಾತನಾಡಲಿಲ್ಲ’ ಎಂದು ಮುಸ್ಲಿಂ ಸಮುದಾಯದ ಮುಖವಾಣಿ ಪತ್ರಿಕೆಯಾಗಿರುವ ಸುಪ್ರಭಾತಂ ತನ್ನ ಸಂಪಾದಕೀಯದಲ್ಲಿ ಟೀಕಿಸಿದೆ.