ಮೋದಿ ಏಕೆ ಪದೇ ಪದೇ ಬಂಗಾಳಕ್ಕೆ ಬರ್ತಾರೆ?

| Published : Mar 10 2024, 01:31 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಅಗಾಗ ಬಂಗಾಳಕ್ಕೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರವು ನಿಜವಾಗಲೂ ಅಭಿವೃದ್ಧಿ ಕಾರ್ಯಗಳು ಮಾಡಿದ್ದರೆ, ಮೋದಿ ಈ ತರ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುವ ಅಗತ್ಯ ಇರುತ್ತಿರಲಿಲ್ಲ.

ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಅಗಾಗ ಬಂಗಾಳಕ್ಕೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರವು ನಿಜವಾಗಲೂ ಅಭಿವೃದ್ಧಿ ಕಾರ್ಯಗಳು ಮಾಡಿದ್ದರೆ, ಮೋದಿ ಈ ತರ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುವ ಅಗತ್ಯ ಇರುತ್ತಿರಲಿಲ್ಲ. ಅವರಿಗೆ ಆತ್ಮನಿರ್ಭರ ಭಾರತದ ಮೇಲೆ ನಂಬಿಕೆ ಇದ್ದರೆ ಈ ರೀತಿ ಮಾಡುವ ಅವಶ್ಯಕತೆ ಇಲ್ಲ. ಬಿಜೆಪಿಗೆ ವ್ಯಾಪಕವಾಗಿ ಬೆಂಬಲವಿದೆ ಹಾಗಾ ಅವರ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಲೋಕಸಭೆ ಚುನಾವಣೆ ಸಮಯದಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಅವಶ್ಯಕತೆ ಇದೆಯೇ? ಎಂದು ಪ, ಬಂಗಾಳ ಕಾಂಗ್ರೆಸ್‌ ಅಧ್ಯಕ್ಷ ಅಧೀರ್‌ ಚೌಧರಿ ವ್ಯಂಗ್ಯವಾಡಿದ್ದಾರೆ.