ಸಾರಾಂಶ
ಉತ್ತರಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು ಪಕ್ಷ ನಿರ್ಧರಿಸುತ್ತದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಗಾಜಿಯಾಬಾದ್: ಉತ್ತರಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು ಪಕ್ಷ ನಿರ್ಧರಿಸುತ್ತದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈಗಾಗಲೇ ಕೇರಳದ ವಯನಾಡು ಕ್ಷೇತ್ರದಿಂದ ಈಗಾಗಲೇ ನಾಮಪತ್ರ ಸಲ್ಲಿಸಿರುವ ರಾಹುಲ್‌ಗೆ, ಸಾಂಪ್ರದಾಯಿಕವಾಗಿ ಸ್ಪರ್ಧಿಸುತ್ತಾ ಬಂದಿರುವ ಅಮೇಠಿ ಕ್ಷೇತ್ರದಿಂದಲೂ ಕಣಕ್ಕಿಳಿಯುವ ಕುರಿತು ಪ್ರಶ್ನೆ ಕೇಳಿದಾಗ ನೇರವಾಗಿ ಉತ್ತರ ನೀಡದೇ ತಪ್ಪಿಸಿಕೊಂಡರು.
ಕಳೆದ ಬಾರಿ ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು. ಹೀಗಾಗಿ ಈ ಬಾರಿ ಅಲ್ಲಿ ಅವರ ಸ್ಪರ್ಧೆ ಅನುಮಾನ ಎನ್ನಲಾಗುತ್ತಿದೆ. ಮತ್ತೊಂದೆಡೆ ರಾಹುಲ್‌ರ ಸೋದರಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ, ತಾವು ಪಕ್ಷ ಬಯಸಿದರೆ ಅಮೇಠಿಯಿಂದ ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ.