ಸಾರಾಂಶ
ಕಾರ್ಯಕ್ಷೇತ್ರಗಳಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ಧ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಿ ಸುರಕ್ಷತೆಯನ್ನು ಖಚಿತಪಡಿಸುವ ಪಾಶ್ (ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆಯು ರಾಜಕೀಯ ಪಕ್ಷಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದುರ್ಬಳಕೆ ಸಾಧ್ಯತೆಯೇ ಹೆಚ್ಚು: ಪೀಠ
ನವದೆಹಲಿ: ಕಾರ್ಯಕ್ಷೇತ್ರಗಳಲ್ಲಿ ಮಹಿಳಾ ಉದ್ಯೋಗಿಗಳ ವಿರುದ್ಧ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಿ ಸುರಕ್ಷತೆಯನ್ನು ಖಚಿತಪಡಿಸುವ ಪಾಶ್ (ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆಯು ರಾಜಕೀಯ ಪಕ್ಷಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಪಕ್ಷಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಲ್ಲ ಎಂದಿದ್ದ ಕೇರಳ ಹೈಕೋರ್ಟ್‌ನ 2022ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಪೀಠ, ‘ರಾಜಕೀಯ ಪಕ್ಷವನ್ನು ಸೇರುವುದೆಂದರೆ ಕೆಲಸಕ್ಕೆ ಸೇರಿದಂತಲ್ಲ. ಹೀಗಿರುವಾಗ ಪಕ್ಷಗಳನ್ನು ಪಾಶ್ ಕಾಯ್ದೆಯ ಅಡಿ ತರಲು ಹೇಗೆ ಸಾಧ್ಯ?’ ಎಂದು ಪ್ರಶ್ನಿಸಿದೆ. ‘ಒಂದೊಮ್ಮೆ ಹೀಗೆ ಮಾಡಿದರೆ, ತಮ್ಮ ಅಥವಾ ಅನ್ಯ ಪಕ್ಷಗಳ ಸದಸ್ಯರನ್ನು ಬೆದರಿಸಲು ಇದು ಪ್ರಮುಖ ಅಸ್ತ್ರವಾಗುವ ಸಾಧ್ಯತೆಯಿದೆ’ ಎಂದು ಅಭಿಪ್ರಾಯಪಟ್ಟಿದೆ.
ಆದರೆ, ರಾಜಕೀಯದಲ್ಲಿರುವ ಮಹಿಳೆಯರ ಸುರಕ್ಷತೆಯನ್ನು ಹೇಗೆ ದೃಢಪಡಿಸಲಾಗುವುದು ಎಂಬ ಬಗ್ಗೆ ಕೋರ್ಟ್ ಯಾವುದೇ ಸ್ಪಷ್ಟನೆ ನೀಡಿಲ್ಲ.ಪ್ರಸ್ತುತ ಸಿಪಿಎಂ ಪಕ್ಷದಲ್ಲಿ ಮಾತ್ರವೇ ಆಂತರಿಕ ದೂರು ಸಮಿತಿ ಇದೆ.