ಯುಪಿ ಪೊಲೀಸ್‌ ನೇಮಕ ಪರೀಕ್ಷೆಯಲ್ಲಿ ಅಕ್ರಮ: ಮರು ಪರೀಕ್ಷೆಗೆ ನಿರ್ಧಾರ

| Published : Feb 25 2024, 01:46 AM IST / Updated: Feb 25 2024, 11:33 AM IST

ಯುಪಿ ಪೊಲೀಸ್‌ ನೇಮಕ ಪರೀಕ್ಷೆಯಲ್ಲಿ ಅಕ್ರಮ: ಮರು ಪರೀಕ್ಷೆಗೆ ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ಉತ್ತರ ಪ್ರದೇಶದಲ್ಲಿ ನಡೆದ ಪೊಲೀಸ್‌ ಕಾನ್ಸ್‌ಟೇಬಲ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿ ಮರುಪರೀಕ್ಷೆ ಮಾಡುವಂತೆ ಯೋಗಿ ಆದಿತ್ಯನಾಥ್‌ ಸೂಚಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಕಾನ್ಸ್‌ಟೆಬಲ್‌ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಖಚಿತಪಟಟ್ಟ ಹಿನ್ನೆಲೆಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆಯನ್ನೇ ಯುಪಿ ಸರ್ಕಾರ ರದ್ದು ಪಡಿಸಿದೆ.

ಜೊತೆಗೆ ಮುಂದಿನ 6 ತಿಂಗಳಲ್ಲಿ ಹೊಸದಾಗಿ ಪರೀಕ್ಷೆ ನಡೆಸುವ ಭರವಸೆ ನೀಡಿದೆ. ಫೆ.17-18ರಂದು 48 ಲಕ್ಷ ಆಕಾಂಕ್ಷಿಗಳು ಪರೀಕ್ಷೆ ಬರೆದಿದ್ದರು.

ಆದರೆ ಇದರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ನಡೆದಿದೆ. ಈ ಅಕ್ರಮಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈಗಾಗಲೇ 240ಕ್ಕೂ ಹೆಚ್ಚಿನ ಜನರನ್ನು ಬಂಧಿಸಿದ್ದಾರೆ.

ಇದರ ತನಿಖೆ ನಡೆಸಲು ವಿಶೇಷ ಕಾರ್ಯಪಡೆ ರಚಿಸಿದೆ. ಜೊತೆಗೆ ಇನ್ನು ಆರು ತಿಂಗಳಿನಲ್ಲಿ ಮರು ಪರೀಕ್ಷೆ ನಡೆಸಲು ಆದೇಶಿಸಿದೆ.