ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಶನಿವಾರ ದೆಹಲಿಯ ಜಂತರ್ ಮಂತರ್‌ನಲ್ಲಿ 2ನೇ ಪ್ರತಿಭಟನೆ ನಡೆಸಿತು.
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಶನಿವಾರ ದೆಹಲಿಯ ಜಂತರ್ ಮಂತರ್‌ನಲ್ಲಿ 2ನೇ ಪ್ರತಿಭಟನೆ ನಡೆಸಿತು.
ಬಿಗಿ ಪೊಲೀಸ್ ಭದ್ರತೆ
ಬಿಗಿ ಪೊಲೀಸ್ ಭದ್ರತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಭಾಗವಹಿಸಿದರು. ಪ್ರತಿಭಟನಾಕಾರರು ತಟ್ಟೆ ಮತ್ತು ಚಮಚವನ್ನು ಹಿಡಿದು, ಪ್ರಧಾನಿ ರಾಜೀನಾಮೆಗೆ ಆಗ್ರಹಿಸಿದರು.
ಜೂ.6ರಂದು ದೆಹಲಿಯಲ್ಲಿ ಸಿಜೆಪಿ ಮೊದಲ ಪ್ರತಿಭಟನೆ
ಇದಕ್ಕೂ ಮುನ್ನ ಜೂ.6ರಂದು ದೆಹಲಿಯಲ್ಲಿ ಸಿಜೆಪಿ ಮೊದಲ ಪ್ರತಿಭಟನೆ ನಡೆಸಿತ್ತು. ಆ ಬಳಿಕ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ನಡೆಸಲಾಗಿತ್ತು.