ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಬುಲಾವ್ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ದಿಢೀರ್ ಹರಿಯಾಣಗೆ ತೆರಳಿ ಸಮಾಲೋಚನೆ ನಡೆಸಿದರು. ಸುರ್ಜೆವಾಲಾ ಕರೆ ಹಿನ್ನೆಲೆಯಲ್ಲಿ ಅಲ್ಲಿಂದಲೇ ಶನಿವಾರ ಸಂಜೆಯೇ ದೆಹಲಿಗೆ

 ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಬುಲಾವ್ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ದಿಢೀರ್ ಹರಿಯಾಣಗೆ ತೆರಳಿ ಸಮಾಲೋಚನೆ ನಡೆಸಿದರು.

ಸುರ್ಜೆವಾಲಾ ಕರೆ ಹಿನ್ನೆಲೆಯಲ್ಲಿ ಅಲ್ಲಿಂದಲೇ ಶನಿವಾರ ಸಂಜೆಯೇ ದೆಹಲಿಗೆ

ಹುಬ್ಬಳ್ಳಿಯಲ್ಲಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರು ಸುರ್ಜೆವಾಲಾ ಕರೆ ಹಿನ್ನೆಲೆಯಲ್ಲಿ ಅಲ್ಲಿಂದಲೇ ಶನಿವಾರ ಸಂಜೆಯೇ ದೆಹಲಿಗೆ ತೆರಳಿದ್ದರು. ಭಾನುವಾರ ಮುಂಜಾನೆ ದೆಹಲಿಯಿಂದ ಹರಿಯಾಣಕ್ಕೆ ತೆರಳಿ ಕೈತಾಲ್‌ನಲ್ಲಿದ್ದ ಸುರ್ಜೇವಾಲಾ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. 

ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಪ್ರಮುಖವಾಗಿ ಪ್ರಸ್ತಾಪ

ಇದೇ ವೇಳೆ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಪ್ರಮುಖವಾಗಿ ಪ್ರಸ್ತಾಪವಾಯಿತು ಎಂದು ಹೇಳಲಾಗಿದೆ. ಜಮೀರ್ ಅಹಮದ್ ಖಾನ್ ಅವರು ಸುರ್ಜೇವಾಲಾ ಭೇಟಿ ನಂತರ ಮತ್ತೆ ದೆಹಲಿ ಮಾರ್ಗವಾಗಿ ಹುಬ್ಬಳ್ಳಿಗೆ ವಾಪಸಾದರು.