ಸಾರಾಂಶ
ಕಡೂರು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಡೂರು ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜವಳಿ ಪಾರ್ಕ್ ನಿರ್ಮಾಣ ಮಾಡಲು ₹25 ಕೋಟಿ ಮೀಸಲಿಟ್ಟಿರುವುರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಡೂರು ಕ್ಷೇತ್ರದ ಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಭದ್ರಾ ಉಪ ಕಣಿವೆ ಕಾಮಗಾರಿಗೆ ₹407 ಕೋಟಿ
ಕನ್ನಡಪ್ರಭ ವಾರ್ತೆ, ಕಡೂರುಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಡೂರು ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜವಳಿ ಪಾರ್ಕ್ ನಿರ್ಮಾಣ ಮಾಡಲು ₹25 ಕೋಟಿ ಮೀಸಲಿಟ್ಟಿರುವುರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಡೂರು ಕ್ಷೇತ್ರದ ಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಸರ್ಕಾರದ ಬಜೆಟ್ ಕುರಿತಂತೆ ಮಾತನಾಡಿದ ಅವರು, ಈ ವಿಷಯ ತಿಳಿಸಿ ಬಜೆಟ್ ಮಂಡಿಸುವಾಗ ಮುಖ್ಯಮಂತ್ರಿಗಳ ಬಾಯಲ್ಲಿ ಇದೇ ಮೊದಲ ಬಾರಿಗೆ ಕಡೂರು ಎಂಬ ಹೆಸರು ಉಚ್ಚರಿಸುವ ಮೂಲಕ ಬರಪೀಡಿತ ಕಡೂರು ತಾಲೂಕಿಗೆ ನೀರಾವರಿ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ವಿವಿಧ ಕೊಡುಗೆ ನೀಡಿರುವುದು ನಮ್ಮ ಸೌಭಾಗ್ಯ ಎಂದರು. ಅಲ್ಲದೆ ಬಜೆಟ್ ಪುಸ್ತಕದಲ್ಲಿ ಚೀರನಹಳ್ಳಿ ಬಳಿ ಜವಳಿ ಪಾರ್ಕ್ ನಿರ್ಮಾಣದ ಜೊತೆ ಭದ್ರಾ ಉಪ ಕಣಿವೆ ಯೋಜನೆ 3ನೇ ಹಂತದ ಯೋಜನೆ ಕಾಮಗಾರಿಗೆ ₹407 ಕೋಟಿ ಅನುದಾನ ಮೀಸಲಿಟ್ಟಿರುವುದನ್ನು ನಮ್ಮ ಕಡೂರು ತಾಲೂಕಿನ ಜನತೆ ಅದೃಷ್ಟ ಎಂದೇ ಭಾವಿಸುತ್ತೇನೆ ಎಂದು ಹೇಳಿದ ಅವರು ಬರಗಾಲದ ಪ್ರದೇಶವಾಗಿರುವ ಕಡೂರು ತಾಲೂಕಿಗೆ ವಿಶೇಷ ಆದ್ಯತೆ ನೀಡಿರುವ ಮುಖ್ಯಮಂತ್ರಿಗಳು ವಾಸ್ತವ ಸ್ಥಿತಿ ಅರಿಯುವ ಮೂಲಕ ಈ ಕೊಡುಗೆ ನೀಡಿದ್ದಾರೆ. ಇದು ನಮ್ಮ ಬಯಲು ಪ್ರದೇಶದ ಜನರ ಸೌಭಾಗ್ಯ ಎಂದು ಭಾವಿಸುತ್ತೇನೆ ಎಂದರು.ಇನ್ನು ಬಜೆಟ್ ಮಂಡನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ವರ್ಗಗಳನ್ನು ಆದ್ಯತೆಯಾಗಿ ಪರಿಗಣಿಸಿ ಯಾವುದೇ ರೀತಿ ಅನ್ಯಾಯವಾಗದಂತೆ ಸಾಮಾಜಿಕ ನ್ಯಾಯ ನೀಡುವ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದ ಅವರು ಸರ್ಕಾರ ಗ್ಯಾರಂಟಿಗಳಿಗೂ ಹಣಕಾಸು ಒದಗಿಸಿ ರಾಜ್ಯದ ಅಭಿವೃದ್ಧಿಗೆ ಹೆಚ್ಚು ಆಸಕ್ತಿ ವಹಿಸಿ ಮತ್ತಷ್ಟು ಅನುದಾನ ನೀಡುವ ಮೂಲಕ ಕ್ಷೇತ್ರಗಳ ಅಭಿವೃದ್ಧಿಗೂ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.7ಕೆಕೆಡಿಯು1.ಕೆ.ಎಸ್. ಆನಂದ್.