ಇದೇ ವೇಳೆ ಮದುವೆಯಾಗಿ 50 ವರ್ಷ ದಾಪಂತ್ಯ ಜೀವನ ಕಳೆದ 490ಕ್ಕೂ ಹೆಚ್ಚು ಜೋಡಿ ವೃದ್ಧ ದಂಪತಿಗಳಿಗೆ ಇದೇ ಸಂದರ್ಭದಲ್ಲಿ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ, ಬಾಗಿನ ಮತ್ತು ನೆನಪಿನ ಕಾಣಿಕೆ ಕೊಟ್ಟು ಗೌರವಿಸಲಾಯಿತು.

ದಾಂಪತ್ಯ ಜೀವನಕ್ಕೆ ಕಾಲಿರಿಸಿದ 6 ಜೋಡಿಗಳು

ನಾಗಮಂಗಲ: ತಾಲೂಕಿನ ಆದಿಚುಂಚನಗಿರಿಯಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ 6 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿ ಸತಿ ಪತಿಗಳಾಗಿ ಕ್ಷೇತ್ರಾಧಿದೇವತೆಗಳು ಹಾಗೂ ನಿರ್ಮಲಾನಂದನಾಥಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಇದೇ ವೇಳೆ ಮದುವೆಯಾಗಿ 50 ವರ್ಷ ದಾಪಂತ್ಯ ಜೀವನ ಕಳೆದ 490ಕ್ಕೂ ಹೆಚ್ಚು ಜೋಡಿ ವೃದ್ಧ ದಂಪತಿಗಳಿಗೆ ಇದೇ ಸಂದರ್ಭದಲ್ಲಿ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ, ಬಾಗಿನ ಮತ್ತು ನೆನಪಿನ ಕಾಣಿಕೆ ಕೊಟ್ಟು ಗೌರವಿಸಲಾಯಿತು.

ಶ್ರೀಮಠದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಮದುವೆಯ ಎಲ್ಲಾ ವಿಧಿವಿಧಾನಗಳು ಅಚ್ಚುಕಟ್ಟಾಗಿ ನೆರವೇರಿತು. ಹೋಮ ಹವನ ಪೂಜಾ ಕೈಂಕರ್ಯಗಳು ಜರುಗಿದವು. ಸರಳ ಸಾಮೂಹಿಕ ವಿವಾಹ ಮಹೋತ್ಸವದ ಹಿನ್ನೆಲೆಯಲ್ಲಿ ಬಿಜಿಎಸ್ ಸಭಾಭವನವನ್ನು ವಿದ್ಯುತ್ ದೀಪಾಲಂಕಾರ ಮತ್ತು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.

ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀಗಳು ಹೋಮ ಹವನ, ಧಾರ್ಮಿಕ ಸಂಪ್ರದಾಯಗಳಲ್ಲಿ ಪಾಲ್ಗೊಂಡು ಪೂರ್ಣಾಹುತಿ ಅರ್ಪಿಸುವ ಮೂಲಕ ಮದುವೆಯ ವಿಧಿವಿಧಾನಗಳನ್ನು ಪೂರೈಸಿದರು. ನಂತರ ವಧುವರರಿಗೆ ಮಂತ್ರಾಕ್ಷತೆ ಹಾಕಿ ಫಲ ತಾಂಬೂಲ ನೀಡಿ ಹರಸಿದರು. ವಧುವಿಗೆ ಸೀರೆ, ರವಿಕೆ, ತಾಳಿ, ಕಾಲುಂಗುರ ಮುತೈದೆಯರಿಗೆ ಸಲ್ಲುವ ಬಾಗಿನ ನೀಡಲಾಯಿತು. ಗಂಡಿಗೆ ಪೇಟ, ಪಂಚೆ, ಶರ್ಟ್ ನೀಡಲಾಯಿತು.