ಸಾರಾಂಶ
ಗ್ರಾಮೀಣ ಪ್ರದೇಶಗಳಲ್ಲಿನ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ಎಲ್ಲ ಮಹಿಳಾ ಸಂಘಗಳಿಗೆ ಸಮಾನ ಸೇವೆಯನ್ನು ನೀಡುತ್ತಿದೆ. ಗ್ರಾಮೀಣ ಮಹಿಳೆಯರ ಆರ್ಥಿಕ ಮತ್ತು ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಗ್ರಾಮೀಣ ಬಡ ಕುಟುಂಬಗಳಿಗೆ ಜೀವನದ ಬೆಳಕಾಗಿ ಧಗ್ರಾ ನಿಂತಿದೆ
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕಾದರೆ ಸಂಘ ಸಂಸ್ಥೆಗಳಿಂದ ದೊರೆಯುವ ತರಬೇತಿಗಳನ್ನು ಪಡೆದು ಸ್ವಯಂ ಉದ್ಯೋಗಿಗಳಾಗಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೆಎಎಸ್ ಅಧಿಕಾರಿ ಬಿ.ಎನ್.ವರಪ್ರಸಾದ್ ರೆಡ್ಡಿ ತಿಳಿಸಿದರು.ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿಯ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಆಯೋಜಿಸಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಹಿಳಾ ಸಬಲೀಕರಣಕ್ಕೆ ಒತ್ತು
ಗ್ರಾಮೀಣ ಪ್ರದೇಶಗಳಲ್ಲಿನ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ಎಲ್ಲ ಮಹಿಳಾ ಸಂಘಗಳಿಗೆ ಸಮಾನ ಸೇವೆಯನ್ನು ನೀಡುತ್ತಿದೆ ಗ್ರಾಮೀಣ ಮಹಿಳೆಯರ ಆರ್ಥಿಕ ಮತ್ತು ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅದೆಷ್ಟೋ ಕುಟುಂಬಗಳಿಗೆ ಜೀವನದ ಬೆಳಕಾಗಿ ನಿಂತಿದೆ ಎಂದು ತಿಳಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು ಮಾತನಾಡಿ, ನಮ್ಮ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದ ವತಿಯಿಂದ ಅನಾಥ ವೃದ್ಧರಿಗೆ ಮಾಸಿಕ ಸಾವಿರ ರೂಪಾಯಿ ಆರ್ಥಿಕ ದನವನ್ನು ನೀಡುತ್ತಿದೆ ಮನೆಗಳನ್ನು ಕಟ್ಟಿಕೊಳ್ಳಲು ಆಗದಂತಹ ತೀರ ಕಡುಬಡವರಿಗೆ ಮನೆಗಳನ್ನು ಸಹ ಕಟ್ಟಿಕೊಡುತ್ತಿದ್ದಾರೆ ಎಂದರು.ಧಗ್ರಾದಿಂದ ಕೆರೆಗಳ ಅಭಿವೃದ್ಧಿ
ಅದೇ ರೀತಿ ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹ ತೀರಿಸುವ ಸಾವಿರ ಕೆರೆಗಳಿಗೆ ಸಾವಿರ ಕೆರೆಗಳಿಗೆ ಹುಳೆತ್ತುವ ಕೆಲಸವನ್ನು ಸಹ ಮಾಡುತ್ತಿದ್ದೇವೆ, ನಮ್ಮ ಸಂಘದ ಸದಸ್ಯರ ಕುಟುಂಬಗಳಲ್ಲಿ ವಿದ್ಯಾಭ್ಯಾಸವನ್ನು ಕೊಡಿಸಲಾಗದೇ ಇರುವಂತಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದ್ದೇವೆ ಹಾಗೂ ಇನ್ನೂ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವುದಾಗಿ ತಿಳಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುನಿತಾ ಮಹೇಶ್, ಉಪಾಧ್ಯಕ್ಷರಾದ ಚಂದ್ರಕಲಾ ಶ್ರೀನಿವಾಸ್, ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು, ತಾಲೂಕು ನಿರ್ದೇಶಕರಾದ ನಾಗರಾಜುರವರು, ರೈತ ಸಂಘದ ಅಧ್ಯಕ್ಷರಾದ ಮಾಳಪ್ಪ, ನೀರಾವರಿ ಹೋರಾಟಗಾರರಾದ ಮಧುಸೂದನ್ ರೆಡ್ಡಿ, ಸಂಜೀವ ರೆಡ್ಡಿ ಮತ್ತಿತರರು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))