ಸೋ.ಪೇಟೆ: ಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಆಟಿ ಸಂಭ್ರಮೋತ್ಸವ

| Published : Sep 16 2025, 12:04 AM IST

ಸೋ.ಪೇಟೆ: ಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಆಟಿ ಸಂಭ್ರಮೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ನಾರಾಯಣ ಗುರು ಸೇವಾ ಸಮಿತಿ, ತುಳುನಾಡು ಬಿಲ್ಲವ ಮಹಿಳಾ ಸಂಘ ಆಶ್ರಯದಲ್ಲಿ ೧೦ನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟ, ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಮಾನಸ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಶ್ರೀ ನಾರಾಯಣ ಗುರು ಸೇವಾ ಸಮಿತಿ, ತುಳುನಾಡು ಬಿಲ್ಲವ ಮಹಿಳಾ ಸಂಘ ಆಶ್ರಯದಲ್ಲಿ ೧೦ನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟ, ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಮಾನಸ ಸಭಾಂಗಣದಲ್ಲಿ ನಡೆಯಿತು.ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ ಮಾತನಾಡಿ, ಜನಾಂಗದ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದೆ. ಪೋಷಕರು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು. ನಾರಾಯಣಗುರು ಒಬ್ಬ ತತ್ವಜ್ಞಾನಿ, ಸಮಾಜ ಸುಧಾರಕರಾಗಿದ್ದರು. ಸೋಮವಾರಪೇಟೆಯಲ್ಲಿ ಶ್ರೀ ನಾರಾಯಣಗುರು ಸೇವಾ ಸಮಿತಿ ಕಟ್ಟಡೆ ನಿರ್ಮಾಣಕ್ಕೆ ೫ ಲಕ್ಷ ರು.ಗಳ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಿದರು.ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ನಾರಾಯಣಗುರುಗಳು ಒಂದು ಜಾತಿ, ಒಂದು ಧರ್ಮ, ಎಲ್ಲ ಮಾನವರಿಗೆ ಒಂದೇ ದೇವರು ಎಂದು ಬೋಧನೆ ಮಾಡಿದರು. ಶಿಕ್ಷಣ ಮತ್ತು ಕೃಷಿಯನ್ನು ಪ್ರೋತ್ಸಾಹಿಸಿದರು ಎಂದರು.

ಕುದ್ರೋಳಿ ಗೋಕರ್ಣನಾಥೆಶ್ವರ ದೇವಾಲಯದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ರಾಜ್ಯ ಶ್ರೀ ನಾರಾಯಣಗುರು ವಿಚಾರಣ ವೇದಿಕೆ ರಾಜ್ಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಕೊಡಗು ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಲಿಂಗಪ್ಪ ಪೂಜಾರಿ, ಸಾಮಾಜಿಕ ಕಾರ್ಯಕರ್ತ ಪದ್ಮನಾಭ, ಸಮಿತಿಯ ತಾಲೂಕು ಅಧ್ಯಕ್ಷ ಬಿ.ಆರ್. ಚಂದ್ರಹಾಸ, ತುಳುನಾಡ ಬಿಲ್ಲವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಬೇಬಿ ಚಂದ್ರಹಾಸ, ಪ್ರಮುಖರಾದ ಬಿ.ಎಸ್.ಶ್ರೀಧರ್, ಸುಧೀರ್, ಮಣಿ ಮುಖೇಶ್, ಪ್ರದೀಪ್, ಇಂದಿರಾ ಮೊಣಪ್ಪ ಇದ್ದರು. ಶೈಕ್ಷಣಿಕ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.