ಸಾರಾಂಶ
ತಾಲೂಕಿನಲ್ಲಿ ಬೇಸಿಗೆ ಹಾಗೂ ಬರಗಾಲ ದಿನಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳನ್ನು ಇತರೆ ಇಲಾಖೆಗಳ ಸಹಕಾರದೊಂದಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿ(ಇಒ)ಯಾಗಿ ಟಿ.ಆರ್.ಮಲ್ಲಾಡದ ಅವರು ಶುಕ್ರವಾರ ತಾಪಂ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.ಈ ವೇಳೆ ಮಾತನಾಡಿದ ಅವರು, ತಾಲೂಕಿನಲ್ಲಿ ಬೇಸಿಗೆ ಹಾಗೂ ಬರಗಾಲ ದಿನಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳನ್ನು ಇತರೆ ಇಲಾಖೆಗಳ ಸಹಕಾರದೊಂದಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು. ಲೋಕಸಭೆ ಚುನಾವಣೆ ಪ್ರಯುಕ್ತ ಇಲ್ಲಿ ಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣ ಕಟ್ಟಿ ಅವರು ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಪಂಗೆ ವರ್ಗಾವಣೆಯಾದ ಪ್ರಯುಕ್ತ ತೆರವಾದ ಈ ಹುದ್ದೆಗೆ ಮಲ್ಲಾಡದ ಅವರನ್ನು ಸರ್ಕಾರ ನಿಯೋಜಿಸಿದೆ.
ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ, ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕ ರಾಜು ಢಾಂಗೆ, ಉದ್ಯೋಗ ಖಾತರಿ ಸಹಾಯಕ ನಿರ್ದೇಶಕ ಪಿ.ಲಕ್ಷ್ಮೀನಾರಾಯಣ, ಪ್ರಭಾರಿ ವ್ಯವಸ್ಥಾಪಕ ಅವಿನಾಶ ಹೊಳೆಪ್ಪಗೋಳ, ಸಿಬ್ಬಂದಿ ಶಂಕರ ಕಾಂಬಳೆ, ಎನ್.ಎಸ್.ಕುಲಕರ್ಣಿ, ಆರ್.ಎನ್.ವಂಜಿರೆ, ನಾಗಲಿಂಗ ಮಾಳಗೆ, ಆಶಾರಾಣಿ ಪಾಟೀಲ, ಎಸ್.ಎಸ್.ದುರ್ಗಾಯಿ, ಅರ್ಷದ ನೇರ್ಲಿ, ಶಂಕರ ಶಿರಗುಪ್ಪಿ, ಮಹಾಂತೇಶ ಬಾದವಾನಮಠ, ಶೇಖರ ಢಂಗೆ ಮತ್ತಿತರರು ಇದ್ದರು.