ಸೋಲನ್ನು ಸವಾಲಾಗಿ ಸ್ವೀಕರಿಸುವ ಗುಣ ಕ್ರೀಡೆಯಿಂದ ಬೆಳೆಯುತ್ತದೆ

| Published : Sep 02 2025, 12:00 AM IST

ಸಾರಾಂಶ

ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಜತೆಗೆ ಕಲಿಕೆಗೆ ಅಗತ್ಯವಾದ ಏಕಾಗ್ರತೆ ಮತ್ತು ಸೋಲನ್ನು ಸವಾಲಾಗಿ ಸ್ವೀಕರಿಸುವ ನಿಟ್ಟಿನಲ್ಲಿ ಕ್ರೀಡೆ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸುವಿಕೆ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ತಟ್ಟೆಕೆರೆ ಬಾರೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯ ಶಿಕ್ಷಕ ಸಂತೋಷ್ ಕಜ್ಜರಿ ಅಭಿಪ್ರಾಯಪಟ್ಟರು. ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಸಹಕಾರದಲ್ಲಿ ಯಶಸ್ವಿಯಾಗಿ ಕ್ರೀಡಾಕೂಟ ನಡೆಸುವ ನಿಟ್ಟಿನಲ್ಲಿ ನೀಲನಕ್ಷೆ ತಯಾರಿಸಿ, ಸುಸೂತ್ರವಾಗಿ ಕ್ರೀಡಾಕೂಟ ನಡೆಸಲಾಗುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಜತೆಗೆ ಕಲಿಕೆಗೆ ಅಗತ್ಯವಾದ ಏಕಾಗ್ರತೆ ಮತ್ತು ಸೋಲನ್ನು ಸವಾಲಾಗಿ ಸ್ವೀಕರಿಸುವ ನಿಟ್ಟಿನಲ್ಲಿ ಕ್ರೀಡೆ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸುವಿಕೆ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ತಟ್ಟೆಕೆರೆ ಬಾರೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯ ಶಿಕ್ಷಕ ಸಂತೋಷ್ ಕಜ್ಜರಿ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಪಂಚಾಯ್ತಿ, ತಾಪಂ., ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ತಟ್ಟೆಕೆರೆ ಬಾರೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಘಟಿಸಿದ ೨೦೨೫-೨೬ನೇ ಸಾಲಿನ ಕಸಬಾ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ಕಸಬಾ ಹೋಬಳಿಯ ೨೯ ಪ್ರೌಢಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಬಿಇಒ ಕಚೇರಿ ಹಾಗೂ ವಿವಿಧ ಇಲಾಖೆಗಳು ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಸಹಕಾರದಲ್ಲಿ ಯಶಸ್ವಿಯಾಗಿ ಕ್ರೀಡಾಕೂಟ ನಡೆಸುವ ನಿಟ್ಟಿನಲ್ಲಿ ನೀಲನಕ್ಷೆ ತಯಾರಿಸಿ, ಸುಸೂತ್ರವಾಗಿ ಕ್ರೀಡಾಕೂಟ ನಡೆಸಲಾಗುತ್ತದೆ ಎಂದರು.

ದೈಹಿಕ ಶಿಕ್ಷಣ ಪರಿವೀಕ್ಷಕ ಸುಜಾತ ಅಲಿ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಪ್ರಕಾಶ್, ತಾಲೂಕು ಅಧ್ಯಕ್ಷ ಹರೀಶ್ ಪಿ.ಎಲ್, ಕಾರ್ಯದರ್ಶಿ ಪುಟ್ಟರಾಜು, ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಕಾಂತರಾಜು, ಮುಖ್ಯ ಶಿಕ್ಷಕರಾದ ವಿವೇಕಾನಂದ, ಸವಿತಾ, ಪ್ರಕಾಶ್, ದೈಹಿಕ ಶಿಕ್ಷಕರಾದ ಬೈರವ, ಪ್ರಭುರಾಜು, ದಿನೇಶ್, ಮಂಜುನಾಥ್, ಪ್ರಕಾಶ್ ಹಿಳಿಯಾಳ, ಹರೀಶ್, ಕೋಮಲಾವತಿ, ಮೀನಾಕ್ಷಿ, ಸುಮಾರಾಣಿ, ಇತರರು ಇದ್ದರು.