ಸರಸ್ವತಿ ವಿದ್ಯಾಲಯದಲ್ಲಿ ‘ಆಡುಂಬೊಲ’ ಕಾರ್ಯಕ್ರಮ

| Published : Nov 17 2024, 01:22 AM IST

ಸಾರಾಂಶ

ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಜಿಎಸ್‌ವಿಎಸ್ ಅಸೋಸಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ಗ್ರಾಮೀಣ ಆಟಗಳ ಕ್ರೀಡಾಕೂಟ ‘ಆಡುಂಬೊಲ’ ನಡೆಯಿತು.

ಕನ್ನಡಪ್ರಭ ವಾರ್ತೆ ಗಂಗೊಳ್ಳಿ

ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಆದ್ದರಿಂದ ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳಲು ಅವಕಾಶಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇಸಿಓ ರಾಜ ಖಾರ್ವಿ ಅಭಿಪ್ರಾಯಪಟ್ಟರು.ಅವರು ಇಲ್ಲಿನ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಜಿಎಸ್‌ವಿಎಸ್ ಅಸೋಸಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ಗ್ರಾಮೀಣ ಆಟಗಳ ಕ್ರೀಡಾಕೂಟ ‘ಆಡುಂಬೊಲ’ವನ್ನು ಉದ್ಘಾಟಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್. ಶುಭ ಹಾರೈಸಿದರು. ಈ ಸಂದರ್ಭ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಬಹುಮಾನಗಳನ್ನು ವಿತರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ವಂದಿಸಿದರು. ಬಾಲಕಿಯರ ವಿಭಾಗದಲ್ಲಿ ಎಸ್.ವಿ. ಟೈಟಾನ್ಸ್ ತಂಡ ಮತ್ತು ಬಾಲಕರ ವಿಭಾಗದಲ್ಲಿ ಎಸ್‌.ವಿ. ರೇಂಜರ್ಸ್ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡವು.