ಸಾರಾಂಶ
ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಶ್ವೇಶತೀರ್ಥ ಸೇವಾಧಾಮ, ಶ್ರೀ ಕೃಷ್ಣ ಸೇವಾಧಾಮ ಟ್ರಸ್ಟ್ ವತಿಯಿಂದ ಕೊಡಮಾಡುವ ಬಾಲ್ಯ ವಾತ್ಸಲ್ಯ ಸಿಂಧು ಪ್ರಶಸ್ತಿಯನ್ನು ಸಂತೆಕಟ್ಟೆ ಕೃಷ್ಣಾನುಗ್ರಹ ಸಂಸ್ಥೆಯ ಮುಖ್ಯಸ್ಥ ಡಾ. ಉಮೇಶ್ ಪ್ರಭು ಅವರಿಗೆ ಪ್ರದಾನ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ದೇವರ ಮೇಲೆ ವಿಶ್ವಾಸ ಇಟ್ಟು ಸೇವೆ ಮಾಡಿದರೆ ನಮ್ಮ ಕೆಲಸಗಳು ಸಾರ್ಥಕವಾಗುವುದರಲ್ಲಿ ಸಂಶಯ ಇಲ್ಲ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.ಅವರು ಬುಧವಾರ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಶ್ವೇಶತೀರ್ಥ ಸೇವಾಧಾಮ, ಶ್ರೀ ಕೃಷ್ಣ ಸೇವಾಧಾಮ ಟ್ರಸ್ಟ್ ವತಿಯಿಂದ ಕೊಡಮಾಡುವ ಬಾಲ್ಯ ವಾತ್ಸಲ್ಯ ಸಿಂಧು ಪ್ರಶಸ್ತಿಯನ್ನು ಸಂತೆಕಟ್ಟೆ ಕೃಷ್ಣಾನುಗ್ರಹ ಸಂಸ್ಥೆಯ ಮುಖ್ಯಸ್ಥ ಡಾ. ಉಮೇಶ್ ಪ್ರಭು ಅವರಿಗೆ ಪ್ರದಾನ ಮಾಡಿ ಆಶೀರ್ವಚನ ನೀಡಿದರು.
ಪ್ರಶಸ್ತಿ ಸ್ವೀಕರಿಸಿದ ಡಾ.ಉಮೇಶ್ ಪ್ರಭು, ಸಮಾಜದಲ್ಲಿ ಎಲ್ಲಿಯೂ ಅನಾಥಾಶ್ರಮ ಹಾಗೂ ವೃದ್ಧಾಶ್ರಮ ಇರಬಾರದು. ಶಿಕ್ಷಣದ ಜತೆಗೆ ಮೌಲ್ಯ ಮತ್ತು ಸಂಸ್ಕಾರ ಕಲಿಸಿಕೊಡಬೇಕು ಎಂದು ಆಶಿಸಿದರು.ಇದೇ ಸಂದರ್ಭದಲ್ಲಿ 60ರ ಸಂಭ್ರಮದಲ್ಲಿರುವ ಪೇಜಾವರ ಸ್ವಾಮೀಜಿಯವರನ್ನು ಬಾಲನಿಕೇತನ ಟ್ರಸ್ಟ್ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಡಾಟ್ ನೆಟ್ ಸಿಇಒ ಡಾ.ನರಸಿಂಹ ಭಟ್ ಉಪಸ್ಥಿತರಿದ್ದರು. ಬಿ.ಕೆ. ನಾರಾಯಣ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಶ್ರೀಕೃಷ್ಣ ಬಾಲನಿಕೇತನ ಆಡಳಿತ ಮಂಡಳಿ ಉಪಾಧ್ಯಕ್ಷ ಪ್ರೊ. ಕಮಲಾಕ್ಷ ಸ್ವಾಗತಿಸಿದರು. ಕಾರ್ಯದರ್ಶಿ ರಾಮಚಂದ್ರ ಉಪಾಧ್ಯ ಪ್ರಸ್ತಾವನೆಗೈದು, ಗುರುರಾಜ್ ಭಟ್ ನಿರೂಪಿಸಿದರು.