ಗ್ರಾಪಂ ನೌಕರರಿಂದ ಬೆಂಗಳೂರು ಚಲೋ

| Published : Oct 05 2024, 01:41 AM IST

ಸಾರಾಂಶ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನೌಕರರ ಧರಣಿ ಆರಂಭಿಸಿದ್ದಾರೆ. ಧರಣಿ ದಿನಗಳಲ್ಲಿ ಕುಡಿಯುವ ನೀರು, ಬೀದಿ ದೀಪಗಳಿಗೆ ವಿದ್ಯುತ್‌ ಪೂರೈಕೆ ಹೊರತುಪಡಿಸಿ ಉಳಿದೆಲ್ಲ ಕೆಲಸ ಸ್ಥಗಿತಗೊಳಿಸುವೆವು ಎಂದರು

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ಫೀಡಂ ಪಾಕ್‌ರ್ನಲ್ಲಿ ನಡೆಯುವ ಹೋರಾಟಕ್ಕೆ ಶುಕ್ರವಾರ ದೈನಂದಿನ ಕೆಲಸಗಳನ್ನು ಸ್ಥಗಿತಗೊಳಿಸಿ ತೆರಳುತ್ತಿದ್ದೇವೆ ಎಂದು ಪಿಡಿಒ ನೌಕರರ ಸಂಘದ ಅಧ್ಯಕ್ಷ ವೇಣು ತಿಳಿಸಿದರು. ಬೇಡಿಕೆಹಳಿಗೆ ಸ್ಪಂದಿಸುತ್ತಿಲ್ಲ

ಬೆಂಗಳೂರು ಚಲೋ ಕಾರ್ಯಕ್ರಮದ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿ, ಪಿಡಿಒಗಳ ಹುದ್ದೆ ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಣ, ನರೇಗಾ ಯೋಜನೆಗೆ ಗುರಿ ನಿಗದಿ ಕೈಬಿಡುವುದು, ಕೂಸಿನ ಮನೆ ಮುಂದುವರಿಸದಿರುವುದು, ಅಗತ್ಯ ಲೆಕ್ಕ ಸಹಾಯಕರು, ತಾಂತ್ರಿಕ ಸಿಬ್ಬಂದಿ ನೇಮಕ, ಜೇಷ್ಠಾತಾ ಪಟ್ಟಿ ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲ ನೌಕರರು ಭಾಗವಹಿಸುತ್ತಿದ್ದೇವೆ ಎಂದರು.

ಪಟ್ಟಣದಿಂದ 500ಕ್ಕೂ ಅಧಿಕ ಸಿಬ್ಬಂದಿ ಭಾಗವಹಿಸಲಿದ್ದಾರೆ. ಧರಣಿ ದಿನಗಳಲ್ಲಿ ಕುಡಿಯುವ ನೀರು, ಬೀದಿ ದೀಪಗಳಿಗೆ ವಿದ್ಯುತ್‌ ಪೂರೈಕೆ ಹೊರತುಪಡಿಸಿ ಉಳಿದೆಲ್ಲ ಕೆಲಸ ಸ್ಥಗಿತಗೊಳಿಸುವೆವು ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ವರದರಾಜು, ಕಾರ್ಯದರ್ಶಿ ಸಂಘದ ಅಧ್ಯಕ್ಷ ಚಂದ್ರಪ್ಪ, ಕರವಸೂಲಿಗಾರರ ಸಂಘದ ಅಧ್ಯಕ್ಷ ಮುನಿರಾಜು, ಕಂಪ್ಯೂಟರ್ ಆಪರೇಟರ್ ಸಂಘದ ಅಧ್ಯಕ್ಷ ಕೇದಾರನಾಥ್ ಮೊದಲಾದವರು ಇದ್ದರು.