ಷಬ್ಯಾಡಗಿ ಕ್ಷೇತ್ರದಿಂದ ಒಂದು ಬಾರಿ ಹಾಗೂ ಹಾವೇರಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಜನಸೇವೆ ಸಲ್ಲಿಸಿರುವ ಲಮಾಣಿ ಅವರಿಗೆ ಈ ಬಾರಿ ಸಚಿವ ಸ್ಥಾನ ದೊರೆಯದಿರುವುದು ಸಮಾಜದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರವು ಅವರ ಅನುಭವ ಮತ್ತು ಸೇವೆಯನ್ನು ಗುರುತಿಸಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಅರಸೀಕೆರೆಯಲ್ಲಿ ನಡೆದ ಬಂಜಾರ ಸಮಾಜದ ಸಭೆಯಲ್ಲಿಯೂ ಇದೇ ಬೇಡಿಕೆ ಕೇಳಿಬಂದಿದ್ದು, ಸಮಾಜದ ಮುಖಂಡರು ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿರುವ ಬಂಜಾರ ಸಮುದಾಯದ ಜನರ ಆಶಯವೂ ಇದೇ ಆಗಿದೆ ಎಂದು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆಯಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಅವಕಾಶ ನೀಡದಿದ್ದಲ್ಲಿ ಹಂತಹಂತವಾಗಿ ಹೋರಾಟ ರೂಪಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಎಲ್. ಲಮಾಣಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಒತ್ತಾಯಿಸಿದೆ. ಸಮಾಜದ ಪ್ರತಿನಿಧಿತ್ವ ಹಾಗೂ ಅವರ ರಾಜಕೀಯ ಅನುಭವವನ್ನು ಪರಿಗಣಿಸಿ ಮುಖ್ಯಮಂತ್ರಿ ಮತ್ತು ಪಕ್ಷದ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಸಂಘದ ಪದಾಧಿಕಾರಿಗಳು ಆಗ್ರಹಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ರಾಜ್ಯ ಯುವ ಘಟಕದ ಅಧ್ಯಕ್ಷ ಸುನಿಲ್ ನಾಯ್ಕ ಹರತನಹಳ್ಳಿ, ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉಪಸಭಾಪತಿಯಾಗಿ ಹಾಗೂ ಜವಳಿ ಮತ್ತು ಮುಜರಾಯಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದರು.ಬ್ಯಾಡಗಿ ಕ್ಷೇತ್ರದಿಂದ ಒಂದು ಬಾರಿ ಹಾಗೂ ಹಾವೇರಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಜನಸೇವೆ ಸಲ್ಲಿಸಿರುವ ಲಮಾಣಿ ಅವರಿಗೆ ಈ ಬಾರಿ ಸಚಿವ ಸ್ಥಾನ ದೊರೆಯದಿರುವುದು ಸಮಾಜದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರವು ಅವರ ಅನುಭವ ಮತ್ತು ಸೇವೆಯನ್ನು ಗುರುತಿಸಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಅರಸೀಕೆರೆಯಲ್ಲಿ ನಡೆದ ಬಂಜಾರ ಸಮಾಜದ ಸಭೆಯಲ್ಲಿಯೂ ಇದೇ ಬೇಡಿಕೆ ಕೇಳಿಬಂದಿದ್ದು, ಸಮಾಜದ ಮುಖಂಡರು ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿರುವ ಬಂಜಾರ ಸಮುದಾಯದ ಜನರ ಆಶಯವೂ ಇದೇ ಆಗಿದೆ ಎಂದು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆಯಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಅವಕಾಶ ನೀಡದಿದ್ದಲ್ಲಿ ಹಂತಹಂತವಾಗಿ ಹೋರಾಟ ರೂಪಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.ಸಭೆಯಲ್ಲಿ ತಾಲೂಕು ಘಟಕದ ಅಧ್ಯಕ್ಷ ಬಾಪು ಕುಮಾರ್‌ ನಾಯ್ಕ, ಕಾರ್ಯದರ್ಶಿ ಕೃಷ್ಣ ನಾಯ್ಕ, ಲಕ್ಷಣ ನಾಯ್ಕ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರೀತಮ್ ನಾಯ್ಕ, ಪ್ರಭು ನಾಯ್ಕ, ಕುಮಾರ್‌ ನಾಯ್ಕ, ಮೂರ್ತಿ ನಾಯ್ಕ, ತಾಲೂಕು ಯುವ ಘಟಕದ ಅಧ್ಯಕ್ಷ ಸುರೇಶ್ ನಾಯ್ಕ, ಶಿವಕುಮಾರ್‌, ದಿನೇಶ್, ನಗರ ಘಟಕದ ಅಧ್ಯಕ್ಷ ಶರತ್ ನಾಯ್ಕ, ಉಪಾಧ್ಯಕ್ಷ ಸಂಜೀವ್, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಶೈಲಾ, ಕಾರ್ಯದರ್ಶಿ ಪವಿತ್ರಾಬಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.