ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸ್ವಾಗತಿಸಿಲಾಯಿತು.

ಕಾಪು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸ್ವಾಗತಿಸಿಲಾಯಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ನನಗೆ ಇದು ಜೀವನದಲ್ಲಿ ಅತ್ಯಂತ ಶ್ರೇಷ್ಠವಾದ ದಿನ, ಇಂತಹ ಚರಿತ್ರೆಯುಳ್ಳ ದೇವಸ್ಥಾನಕ್ಕೆ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ, ಕೋಟಿ ದುಡ್ಡು ಕೊಟ್ಟರು ಸಿಗದ ಮಾನಸಿಕ ನೆಮ್ಮದಿಯ ಅನುಭವವಾಗಿದೆ, ದೇಶದಲ್ಲಿ ರಾಜ್ಯದಲ್ಲಿ ಎಲ್ಲಿಯೂ ನಡೆಯದ ರೀತಿಯಲ್ಲಿ ಈ ದೇಗುಲದ ಜೀರ್ಣೋದ್ಧಾರ ನಡೆದಿದೆ, ಅ ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.ಈ ಸಂದರ್ಭದಲ್ಲಿ ಕಾಪು ಶಾಸಕ, ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯ ನಿರ್ವಹಣಾಧಿಕಾರಿ ರವಿಕಿರಣ್, ಹುಬ್ಬಳ್ಳಿ ಧಾರವಾಡ ಸಮಿತಿಯ ಸಂಚಾಲಕರಾದ ಸುಗ್ಗಿ ಸುಧಾಕರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್. ಪಾಲನ್, ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ ರಾವ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಜಯರಾಮ್ ಆಚಾರ್ಯ, ಸಾವಿತ್ರಿ ಗಣೇಶ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.