ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ

| Published : Mar 18 2025, 12:36 AM IST

ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ವೈದ್ಯರೊಂದಿಗೆ ತುರ್ತು ಸಭೆ ನಡೆಸಿದ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಲಭ್ಯವಿರುವ ಸವಲತ್ತುಗಳ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಚಿಕಿತ್ಸೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪ್ರೀತಿ, ವಿಶ್ವಾಸದಿಂದ ರೋಗಿಗಳನ್ನು ಉಪಚರಿಸಿದರೆ ಅರ್ಧ ಕಾಯಿಲೆ ಗುಣವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.

ನಂತರ ವೈದ್ಯರೊಂದಿಗೆ ತುರ್ತು ಸಭೆ ನಡೆಸಿದ ಅವರು, ಲಭ್ಯವಿರುವ ಸವಲತ್ತುಗಳ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಚಿಕಿತ್ಸೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪ್ರೀತಿ, ವಿಶ್ವಾಸದಿಂದ ರೋಗಿಗಳನ್ನು ಉಪಚರಿಸಿದರೆ ಅರ್ಧ ಕಾಯಿಲೆ ಗುಣವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು ಎಂದರು.

ತಾಲೂಕು ಆಡಳಿತ ವೈದ್ಯಧಿಕಾರಿ ಡಾ.ವಿ.ಮಹೇಶ್ ಅವರು ಮಾತನಾಡಿ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಚನ್ನರಾಯಪಟ್ಟಣದ ಸಾರ್ವಜನಿಕರ ಕುರಿತು ವಿಶೇಷ ಪ್ರೀತಿ ಇದೆ. ಆಸ್ಪತ್ರೆಗೆ ಸಂಬಂಧಿಸಿ ವಾರಕ್ಕೆ ಒಂದು ಬಾರಿಯಾದರೂ ನನಗೆ ಕರೆ ಮಾಡುತ್ತಾರೆ. ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದಿರುವ ಕುರಿತು ನನ್ನ ಗಮನಕ್ಕೆ ತರುತ್ತಾರೆ ಎಂದರು.

ಜೆಡಿಎಸ್ ಮುಖಂಡರಾದ ಸಿ.ಕೆ. ಸುರೇಶ್, ನವೀನ್, ಡಾ. ರವಿ, ಡಾ. ಪ್ರವೀಣ್, ಡಾ. ಪ್ರಶಾಂತ್, ಡಾ. ಸಿಂಧು, ಸಿಬ್ಬಂದಿ ಶೋಭಾಮಣಿ, ಪದ್ಮ, ಗುರುಮೂರ್ತಿ, ಪ್ರಮೋದ್, ಗಿರಿಜಾ ಇತರರಿದ್ದರು.