ಮಾಜಿ ಸಂಸದೆ ಸುಮಲತಾ ಆಪ್ತ ಬೇಲೂರು ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ

| Published : Jan 18 2025, 12:46 AM IST

ಮಾಜಿ ಸಂಸದೆ ಸುಮಲತಾ ಆಪ್ತ ಬೇಲೂರು ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ
Share this Article
  • FB
  • TW
  • Linkdin
  • Email

ಸಾರಾಂಶ

ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದು, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ.

ಮಂಡ್ಯ: ತಾಲೂಕಿನ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಆರ್‌ಎಪಿಸಿಎಂಎಸ್ ನಿರ್ದೇಶಕ ಬೇಲೂರು ಸೋಮಶೇಖರ್ ಅವರು ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದು, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸೇರ್ಪಡೆಗೊಂಡ ಬೇಲೂರು ಸೋಮಶೇಖರ್ ಅವರನ್ನು ಮನ್‌ಮುಲ್ ನಿರ್ದೇಶಕ ಯು.ಸಿ.ಶಿವಕುಮಾರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹೊಸಹಳ್ಳಿ ಶಿವಲಿಂಗೇಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭಾ ಮಾಜಿ ಸದಸ್ಯ ಅನಿಲ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸಿ.ಕೆ.ನಾಗರಾಜ್, ಬಿಳಿದೇಗಲು ಬೋರೇಗೌಡ, ಮಹದೇವ ಬರಮಾಡಿಕೊಂಡರು.