ಸಾರಾಂಶ
ಚಿಕ್ಕೋಡಿ: ಕಳೆದ 10 ವರ್ಷಗಳಲ್ಲಿ ಬಿಜೆಪಿಯಿಂದ ಭಾರತದ ಚಿತ್ರಣವೇ ಬದಲಾಗಿದೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಎನ್‌ಸಿಪಿ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದ ನಿಪ್ಪಾಣಿ ತಾಲೂಕಿನ ಶೇಂಡೂರ ಗ್ರಾಮದ 25 ಜನ ಎನ್‌ಸಿಪಿ ಕಾರ್ಯಕರ್ತರನ್ನು ಭೀವಶಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡು ಮಾತನಾಡಿದರು.
ಕನ್ನಡಪ್ರಭವಾರ್ತೆ ಚಿಕ್ಕೋಡಿ
ಕಳೆದ 10 ವರ್ಷಗಳಲ್ಲಿ ಬಿಜೆಪಿಯಿಂದ ಭಾರತದ ಚಿತ್ರಣವೇ ಬದಲಾಗಿದೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.ಎನ್‌ಸಿಪಿ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದ ನಿಪ್ಪಾಣಿ ತಾಲೂಕಿನ ಶೇಂಡೂರ ಗ್ರಾಮದ 25 ಜನ ಎನ್‌ಸಿಪಿ ಕಾರ್ಯಕರ್ತರನ್ನು ಭೀವಶಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡು ಮಾತನಾಡಿದ ಅವರು, ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ತಮ್ಮ ಆಡಳಿತ ಅವಧಿಯಲ್ಲಿ ₹ 8,810 ಕೋಟಿಗೂ ಹೆಚ್ಚಿನ ಅಭಿವೃಧ್ಧಿ ಕಾಮಗಾರಿಗಳನ್ನು ಕ್ಷೇತ್ರದಲ್ಲಿ ಕೈಗೊಂಡಿದ್ದಾರೆ. ಇದು ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.
ಗ್ರಾಮದ ರಾಜೇಂದ್ರ ಲಾಡ, ಪ್ರವೀಣ ಲಾಡ ನೇತೃತ್ವದಲ್ಲಿ ವಿನಾಯಕ ಗಿರಿ, ತುಕಾರಾಮ ವಡೇಕರ, ಪಾಂಡುರಂಗ ಲಾಡ, ಗಜಾನನ ಕಾಂಬಳೆ, ರಾಜೇಂದ್ರ ದಳವಿ, ಅಣ್ಣಪ್ಪ ತೋಡಕರ, ಸಂದೀಪ ದೇಸಾಯಿ ಸೇರಿದಂತೆ ಸುಮಾರು 25 ಕಾರ್ಯಕರ್ತರು ಎನ್‌ಸಿಪಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು