ಸಾರಾಂಶ
ಭಾರತೀಯ ಜನತಾ ಪಕ್ಷದ ನೂತನ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್ ನೇತೃತ್ವ ವಹಿಸಿದ್ದರು.
ಕನ್ನಡಪ್ರಭ ಶನಿವಾರಸಂತೆ
ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷದ ನೂತನ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.ಮಾಜಿ ಶಾಸಕ ಅಪ್ಪಚ್ಚುರಂಜನ್ ಮತ್ತು ಬಿಜೆಪಿ ಮುಖಂಡ ಭಾರತೀಶ್ ನೇತೃತ್ವದಲ್ಲಿ ನೂತನ ಸದಸ್ಯತ್ವ ಆಂದೋಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚುರಂಜನ್-ಬೂತ್ ಸಮಿತಿ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಬೂತ್ ಮಟ್ಟದಿಂದ ಪಕ್ಷದ ಒಬ್ಬೊಬ್ಬ ಸದಸ್ಯರು ತಲಾ ನೂರು ಜನರನ್ನು ಸದಸ್ಯತ್ವವನ್ನಾಗಿ ಮಾಡಿದರೆ ಮುಂದೆ ಸ್ಥಳೀಯ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬೂತ್ ಮಟ್ಟದಿಂದ ಪಕ್ಷದ ನೂತನ ಸದಸ್ಯತ್ವಕ್ಕಾಗಿ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದರು.
ಬಿಜೆಪಿ ಮುಖಂಡ ಭಾರತೀಶ್ ಮಾತನಾಡಿದರು. ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿ.ಕೆ.ಲೋಕೇಶ್, ಶನಿವಾರಸಂತೆ ಬಿಜೆಪಿ ಪ್ರಮುಖರಾದ ಬಿ.ಎಸ್.ಅನಂತ್‍ಕುಮಾರ್, ಪ್ರಣಿತ್, ಸವಿತಾ ಸತೀಶ್, ಮನುಕುಮಾರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಪಕ್ಷದ ಪ್ರಮುಖರು ಹಾಜರಿದ್ದರು.