'Build with Gemma' Award for SMVITM Students
ಕಾಪು: ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಅಂಶಿಕಾ, ಆಶ್ಲೇ ಫೆರ್ನಾಂಡಿಸ್ ಮತ್ತು ಚೇತನ್ ವಿ ಕೋಟ್ಯಾನ್ ಅವರು ಬೆಂಗಳೂರಿನ ಎಂ. ಎಸ್. ರಾಮಯ್ಯ ಕಾಲೇಜಿನಲ್ಲಿ ಕಾಗಲ್ ವತಿಯಿಂದ ನಡೆದ ಪ್ರತಿಷ್ಠಿತ ಗೂಗಲ್ ಬಿಲ್ಡ್ ವಿಥ್ ಜೆಮ್ಮಾ ಹ್ಯಾಕಥಾನ್‌ನಲ್ಲಿ ಪ್ರಥಮ ಬಹುಮಾನ ಮತ್ತು 425 ಅಮೆರಿಕನ್ ಡಾಲರ್ ನಗದು ಬಹುಮಾನವನ್ನು ಗೆದ್ದುಕೊಂಡಿದ್ದಾರೆ.
ಈ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಆಡಿಟ್ ಜೆಮ್ಮಾ ಎಂಬ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ ನೀಡುವ ಸಂಸ್ಥೆಗಳಿಗಾಗಿ ರೂಪಿಸಲಾದ ಎಐ ಆಧಾರಿತ ಅನುಸರಣೆ ಮತ್ತು ಅಪಾಯ ಮೌಲ್ಯಮಾಪನ ವೇದಿಕೆಯಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಈ ಬಹುಮಾನ ದೊರೆತಿದೆ.ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಶ್ರೀ ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಪ್ರಾಂಶುಪಾಲರು ಹರ್ಷ ವ್ಯಕ್ತ ಪಡಿಸಿದ್ದಾರೆ.