ಸಾರಾಂಶ
ಪಿ.ಯು.ಸಿ ಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಮೂಲಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಯಾವುದರಲ್ಲೂ ಕಮ್ಮಿ ಇಲ್ಲವೆಂಬುದು ಸಾಬೀತು ಪಡಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆ, ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ. ವಿದ್ಯಾರ್ಥಿಗಳು ಡಾ.ಅಂಬೇಡ್ಕರ್ ವಿಚಾರಧಾರೆಯನ್ನು ಮೈಗೂಡಿಸಿಕೊಳ್ಳಬೇಕು
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಬಡತನದಲ್ಲಿರುವ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುತ್ತಿರುವುದಾಗಿ ಶಾಸಕ ಕೆ.ಹೆಚ್.ಪುಟ್ಟಸ್ವಾಮಿ ಗೌಡರು ಹೇಳಿದರು.ಸರ್ಕಾರಿ ಎಸ್.ಎಸ್.ಇ.ಎ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ನಾನಾ ಸೌಲಭ್ಯ
ಬಡ ಕಟುಂಬದಿಂದ ಬಂದಿರುವ ನನಗೆ ಶಿಕ್ಷಣದ ಮಹಬತ್ವ ತಿಳಿದಿದೆ. ಹಣಕಾಸಿನ ತೊಂದರೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಠಿಯಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಉಚಿತ ಪುಸ್ತಕ ವಿತರಣೆ, ಉಚಿತ ಸ್ಪರ್ದಾತ್ಮಕ ಪರೀಕ್ಷೆಯ ಕಾರ್ಯಾಗಾರವನು ನಡೆಸಲಾಗುತ್ತಿದೆ. ಇದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದಾಗಿ ತಿಳಿಸಿದರು. ಪ್ರಾಂಶುಪಾಲರು ಜಿ ವಿ ಶ್ರೀನಿವಾಸ ಮಾತನಾಡಿ : ಪಿ.ಯು.ಸಿ ಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಮೂಲಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಯಾವುದರಲ್ಲೂ ಕಮ್ಮಿ ಇಲ್ಲವೆಂಬುದು ಸಾಬೀತು ಪಡಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆ, ಕಾಲೇಜಿನ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ ಎಂದರು.ಅಂಬೇಡ್ಕರ್ ವಿಚಾರಧಾರೆಕ್ಷೇತ್ರಶಿಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಡಾ.ಅಂಬೇಡ್ಕರ್ ವಿಚಾರಧಾರೆಯನ್ನು ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತವೆ ಎಂದರು.ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶ್ರೀಮತಿ ಜ್ಯೋತಿರೆಡ್ಡಿ, ಕ್ಷೇತ್ರಶಿಕ್ಷಣಧಿಕಾರಿ ಶ್ರೀನಿವಾಸಮೂರ್ತಿ, ಕೆ. ಹೆಚ್.ಪಿ. ಫೌಂಡೇಶನ್ ಕಾರ್ಯದರ್ಶಿ ಶ್ರೀನಿವಾಸಗೌಡ, ಪೌರಾಯುಕ್ತೆ ಗೀತಾ, ಮತ್ತಿತರರು ಉಪಸ್ಥಿತರಿದ್ದರು.