ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದವರು ಚೌಡಯ್ಯ

| Published : Jan 22 2024, 02:19 AM IST

ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದವರು ಚೌಡಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಭಾರತದ ಸಂವಿಧಾನ, ಸಂಸತ್ತು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸುಮಾರು ಒಂಭತ್ತು ಶತಮಾನಗಳಷ್ಟು ಮೊದಲೇ ಮುನ್ನುಡಿ ಬರೆದವರು 12ನೇ ಶತಮಾನದ ಶಿವಶರಣರಾದ ಅಂಬಿಗರ ಚೌಡಯ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು.ಭಾನುವಾರ ನಗರದ ಅಂಭೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಅಂಬಿಗರ ಚೌಡಯ್ಯನವರ 904ನೇ ಜಯಂತಿ ಕಾರ್ಯಕ್ರಮ ಉಧ್ಘಾಟಿಸಿ,ಶ್ರೀ ಅಂಬಿಗರ ಚೌಡಯ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸಮಾನತೆ ಸಾರಿದ ಚೌಡಯ್ಯ

ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ತೀಕ್ಷ್ಣ ವಚನಗಳಿಂದ ಶರಣರ ವಚನಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಅಂಬಿಗರ ಚೌಡಯ್ಯ ಎಂದರು.

ಮೂಢ ನಂಬಿಕೆಗಳ ವಿರುದ್ಧ ಹೋರಾಟ

ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಶಿವಪುರದಲ್ಲಿ (ಇಂದಿನ ಚೌಡದಾನಪುರ) ಜನಿಸಿದ ಚೌಡಯ್ಯ, 900 ವರ್ಷಗಳ ಹಿಂದೆಯೇ ಜಾತಿ ಪದ್ಧತಿ, ಮೂಢನಂಬಿಕೆಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ್ದ ಅವರು12ನೇ ಶತಮಾನದಲ್ಲಿ ಬೌದ್ಧಿಕ ದಾರಿದ್ರ್ಯದ ವಿರುದ್ಧ ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ದಿಟ್ಟ ಹೆಜ್ಜೆ ಇಟ್ಟ ನಿಜಶರಣ ಅಂಬಿಗರ ಚೌಡಯ್ಯ. ಪ್ರಸ್ತುತ ಬದುಕಿನ ಬಗ್ಗೆ ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬಹುದಾದ ಶರಣರ ವಚನಗಳನ್ನು ನಿತ್ಯ ಬದುಕಿನಲ್ಲಿ ಪಾಲಿಸಬೇಕು. ಈ ಮೂಲಕ ಅವರ ಆದರ್ಶ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಶ್ರೀ ಅಂಬಿಗರ ಚೌಡಯ್ಯರ ಕುರಿತು ಉಪನ್ಯಾಸ ನೀಡಿದ ಶಿಡ್ಲಘಟ್ಟದ ಅಕ್ಷರ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ವಿ.ಪ್ರಕಾಶ್‌ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯನವರ ಆದರ್ಶಗಳನ್ನು ನಾವೇಲ್ಲರೂ ಪಾಲಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿನಡೆಯಬೇಕು.ಸಮಾಜದಲ್ಲಿ ಮುಂದೆ ಬರಬೇಕಾದರೆ ಮಕ್ಕಳಿಗೆ ಉತ್ತಮವಾದ ಶಿಕ್ಷಣ ಮೀಡಬೇಕು ಎಂದರು.ವಿದ್ಯಾರ್ಥಿಗಳಿಗೆ ಸನ್ಮಾನ

ಈ ವೇಳೆ ಬೆಸ್ತ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಯೋಜನಾ ನಿರ್ಧೇಶಕಿ ಧನುರೇಣುಕಾ,ಕನ್ನಡ ಮತ್ತುಸಂಸ್ಕೃತಿ ಇಲಾಖೆಯ ಸಹಾಯಕ ನಿರ್ಧೇಶಕಿ ಎನ್‌.ಮನೀಷಾ,ಬೆಸ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಜಯರಾಂ,ಬೆಸ್ತಜನಾಂಗದ ಮುಖಂಡರಾದ ರಾಜೇಶ್‌, ಭಾರತಿದೇವಿ, ರವಿಕುಮಾರ್‌, ನಾಗರಾಜ್‌, ವೆಂಕಟರೋಣಪ್ಪ, ಅಪ್ಪಲಪ್ಪ, ಪ್ರಸನ್ನ, ಮತ್ತಿತರರು ಇದ್ದರು.ಸಿಕೆಬಿ-2 ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಅಪರ ಡೀಸಿ ಡಾ.ಎನ್.ತಿಪ್ಪೇಸ್ವಾಮಿ ಉದ್ಘಾಟಿಸಿದರು.