ಉಡುಪಿಯಲ್ಲಿ ಅದ್ಭುತವಾಗಿ ಮೂಡಿಬಂದ “ಕ್ರಿಸ್ಮಸ್ ಕ್ರಿಸ್ತೋತ್ಸವ”

| Published : Dec 15 2024, 02:03 AM IST

ಉಡುಪಿಯಲ್ಲಿ ಅದ್ಭುತವಾಗಿ ಮೂಡಿಬಂದ “ಕ್ರಿಸ್ಮಸ್ ಕ್ರಿಸ್ತೋತ್ಸವ”
Share this Article
  • FB
  • TW
  • Linkdin
  • Email

ಸಾರಾಂಶ

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಯೇಸು ಕ್ರಿಸ್ತರ ಜನನದ ಕಥೆಯನ್ನು ನೃತ್ಯರೂಪಕದ ಮೂಲಕ ಅದ್ಭುತವಾಗಿ ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಅದ್ಭುತವಾಗಿ ಪ್ರದರ್ಶನಗೊಂಡಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಯೇಸು ಕ್ರಿಸ್ತರ ಜನನದ ಕಥೆಯನ್ನು ನೃತ್ಯರೂಪಕದ ಮೂಲಕ ಅದ್ಭುತವಾಗಿ ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಅದ್ಭುತವಾಗಿ ಪ್ರದರ್ಶನಗೊಂಡಿತು.ಉಡುಪಿಯ ಯುನೈಟೆಡ್ ಕ್ರಿಶ್ಚಿಯನ್ ಫೋರಂ, ಲೊಂಬಾರ್ಡ್ ಮಿಶನ್ ಆಸ್ಪತ್ರೆ, ಕರ್ನಾಟಕ ಯುವಕ ಸಂಘ ಮತ್ತು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಸಹಯೋಗದೊಂದಿಗೆ ‘ಕ್ರಿಸ್ಮಸ್ ಕ್ರಿಸ್ತೋತ್ಸವ -2024’ ಕಾರ್ಯಕ್ರಮದಲ್ಲಿ ಕೊರಿಯಾದ ಸುಮಾರು 60 ಕಲಾವಿದರ ತಂಡ ವಿಶಿಷ್ಟವಾದ ಧ್ವನಿ ಮತ್ತು ಬೆಳಕಿನ ಸಂಯೋಜನೆಯೊಂದಿಗೆ ಪ್ರದರ್ಶಿಸಿದರು.ಈ ‘ಕ್ರಿಸ್ಮಸ್ ಕ್ರಿಸ್ತೋತ್ಸವ’ವನ್ನು ಬಣ್ಣದ ಬಲೂನುಗಳನ್ನು ಹಾರಿ ಬಿಡುವ ಮೂಲಕ ನೆರೆದಿದ್ದ ವಿವಿಧ ಧರ್ಮಗುರುಗಳು ಮತ್ತು ಗಣ್ಯರು ಚಾಲನೆ ನೀಡಿದರು.ಕ್ರಿಸ್ಮಸ್ ಭಕ್ತಿಗೀತೆಯಾದ ಸೈಲೆಂಟ್ ನೈಟ್ ಅನ್ನು ಎಲ್ಲ ಕ್ರೈಸ್ತ ಸಭೆಗಳ ಧರ್ಮಗುರುಗಳು ಜೊತೆಯಾಗಿ ಏಕಕಾಲದಲ್ಲಿ ಕೊಂಕಣಿ, ಕನ್ನಡ, ತುಳು, ಮಲಯಾಳಂ ಮತ್ತು ಆಂಗ್ಲ ಭಾಷೆಯಲ್ಲಿ ಹಾಡುವುದರ ಮೂಲಕ ಸಭಿಕರನ್ನು ರಂಜಿಸಿದರು.ಸಿಎಸ್ಐ ಕರ್ನಾಟಕ ದಕ್ಷಿಣ ಪ್ರಾಂತ ಧರ್ಮಾಧ್ಯಕ್ಷ ವಂ.ಹೇಮಚಂದ್ರ ಕುಮಾರ್, ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿದರು.

ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್ ಥಿಯೋಲೊಜಿ ಪ್ರಾಂಶುಪಾಲ ವಂ.ಸೈಮನ್ ಅಬ್ರಾಹಾಂ, ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ, ಕರ್ನಾಟಕ ಸರ್ವ ಕ್ರೈಸ್ತ ಸಭೆಗಳ ಒಕ್ಕೂಟ ಉಪಾಧ್ಯಕ್ಷ ಪ್ರಶಾಂತ್ ಜತ್ತನ್ನ, ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀ ಅಧ್ಯಕ್ಷ ಸಂತೋಷ್ ಡಿಸಿಲ್ವಾ, ಅಂತರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆಯ ಜುನ್ ಚಾಂಗ್ ಇಯೋಲ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುಚೀತ್ ನಿರೂಪಿಸಿದರು.