ಸಾರಾಂಶ
ವಿದ್ಯಾರ್ಥಿನಿಯರು ಸಮುದ್ರಪಾಲಾದ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲೆಯನ್ನು ಅಮಾನತು ಮಾಡಲಾಗಿದೆ. ಉಳಿದ ಅತಿಥಿ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸರ್ಕಾರವು ಘೋಷಿಸಿದ ತಲಾ ೫ ಲಕ್ಷಗಳ ಪರಿಹಾರವನ್ನು ಜಿಲ್ಲಾಡಳಿತ ಚೆಕ್ ಮುಖಾಂತರ ಮೃತ ವಿದ್ಯಾರ್ಥಿಗಳ ಪೋಷಕರಿಗೆ ತಲುಪಿಸಲಿದೆ.
ಕನ್ನಡಪ್ರಭ ವಾರ್ತೆ ಕೋಲಾರಮುಳಬಾಗಿಲು ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ೪೬ ಶಾಲಾ ವಿದ್ಯಾರ್ಥಿಗಳು, ೬ ಶಿಕ್ಷಕರು ಬಸ್ಸಿನಲ್ಲಿ ಮುರುಡೇಶ್ವಕ್ಕೆ ಪ್ರವಾಸಕ್ಕೆ ತೆರಳಿದ್ದರು. ಸಂಜೆ ವೇಳೆ ಸಮುದ್ರ ನೀರಿನಲ್ಲಿ ಈಜುವಾಗ ೪ ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮೃತ ವಿದ್ಯಾರ್ಥಿಗಳ ದೇಹವನ್ನು ಗುರುವಾರ ಕೋಲಾರ ಜಿಲ್ಲಾಡಳಿತ ಭವನದಲ್ಲಿ ಇಡಲಾಗಿತ್ತು. ಜಿಲ್ಲಾಧಿಕಾರಿ ಅಕ್ರಂಪಾಷ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಮೃತರಿಗೆ ಅಂತಿಮ ನಮನ ಸಲ್ಲಿಸಿದರು. ಬಳಿದ ಮೃತ ದೇಹಗಳನ್ನು ವಾರಸುದಾರರಿಗೆ ಒಪ್ಪಿಸಲಾಯಿತು. ಪ್ರಾಂಶುಪಾಲೆ ಅಮಾನತು
ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲೆಯನ್ನು ಅಮಾನತು ಮಾಡಲಾಗಿದೆ. ಉಳಿದ ಅತಿಥಿ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸರ್ಕಾರವು ಘೋಷಿಸಿದ ತಲಾ ೫ ಲಕ್ಷಗಳ ಪರಿಹಾರವನ್ನು ಚೆಕ್ ಮುಖಾಂತರ ಮೃತ ವಿದ್ಯಾರ್ಥಿಗಳ ಪೋಷಕರಿಗೆ ತಲುಪಿಸಲಾಗುವುದು ಎಂದರು. ವಸತಿ ಶಿಕ್ಷಣ ಸಂಘಗಳ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಾಂತರಾಜು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಪಿ.ಬಾಗೇವಾಡಿ ಮಾತನಾಡಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕಾಂತರಾಜು, ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಇದ್ದರು.ಸಂಸದರ ಸಂತಾಪ ಮುಳಬಾಗಿಲು ತಾಲ್ಲೂಕಿನ ಕೊತ್ತೂರು (ಬಾಲಸಂದ್ರ) ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ ವೇಳೆ ನಾಲ್ವರು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುತಪಟ್ಟ ಘಟನೆಗೆ ಸಂಸದ ಎಂ.ಮಲ್ಲೇಶ್‌ಬಾಬು ಸಂತಾಪ ಸೂಚಿಸಿದ್ದಾರೆ.