ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ

| Published : Feb 03 2024, 01:47 AM IST

ಸಾರಾಂಶ

ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಜಾಗೃತಿ ಜಾಥಾ ಹುಲಕುಂದ ಗ್ರಾಮಕ್ಕೆ ಬರುತ್ತಿದ್ದಂತೆ ಪೂರ್ಣ ಹೊತ್ತ ಮಹಿಳೆಯರು ಮತ್ತು ವಿವಿಧ ವಾದ್ಯಮೇಳಗಳೊಂದಿಗೆ ಜಾಗೃತಿ ಜಾಥಾ ಸ್ವಾಗತಿಸಲಾಯಿತು.

ಕನ್ನಡಪ್ರಭ ವಾರ್ತೆ ರಾಮದುರ್ಗ

75ನೇ ಗಣರಾಜ್ಯೋತ್ಸವ ಹಿನ್ನೆಲೆ ಸಂವಿಧಾನದ ಆಶಯಗಳನ್ನು ಈಡೇರಿಸುವ, ಸಮಸಮಾಜ ನಿರ್ಮಿಸುವ ಧ್ಯೇಯೋದ್ಧೇಶದಿಂದ ಸಂವಿಧಾನದ ಆಚರಣೆ ಮತ್ತು ಮಹತ್ವದ ಜಾಗೃತಿ ಮೂಡಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲೂಕಿನ ಹುಲಕುಂದ ಗ್ರಾಮದಲ್ಲಿ ಅದ್ದೂರಿಯಿಂದ ಸ್ವಾಗತಿಸಲಾಯಿತು. ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಜಾಗೃತಿ ಜಾಥಾ ಹುಲಕುಂದ ಗ್ರಾಮಕ್ಕೆ ಬರುತ್ತಿದ್ದಂತೆ ಪೂರ್ಣ ಹೊತ್ತ ಮಹಿಳೆಯರು ಮತ್ತು ವಿವಿಧ ವಾದ್ಯಮೇಳಗಳೊಂದಿಗೆ ಜಾಗೃತಿ ಜಾಥಾ ಸ್ವಾಗತಿಸಲಾಯಿತು.

ತಹಸೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಅಂಬೇಡ್ಕರ ರಚಿಸಿದ ಭಾರತದ ಸಂವಿಧಾನ ವಿಶ್ವದ ಶ್ರೇಷ್ಠ ಸಂವಿಧಾನವಾಗಿದ್ದು, ಅದರಲ್ಲಿರುವ ಆಶಯಗಳನ್ನು ಆಚರಣೆಗೆ ತರಬೇಕೆಂದು ಹೇಳಿದರು.

ಶಿಕ್ಷಣ ಸಂಯೋಜಕ ಆನಂದತೀರ್ಥ ಜೋಶಿ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮನಾದ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದು ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಾಥಾ ಸ್ವಾಗತ ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕುಮಾರ ಸಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌. ಟಿ. ಬಳಿಗಾರ, ಸಹಾಯಕ ಕೃಷಿ ನಿರ್ದೇಶಕ ಎಸ್. ಎಫ್. ಬೆಳವಟಗಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಸಂಗೀತಾ ಕುರೇರ, ಹಿಂದುಳಿದ ವರ್ಗಗಳ ಇಲಾಖೆ ಶಿವಕ್ಕಾ ಮಾದರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪತ್ತಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.