ಸಾರಾಂಶ
-ವಾರ್ತಾ ಶಾಖೆಯಿಂದ ಆ.29ರಂದು ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ
------ಕನ್ನಡಪ್ರಭ ವಾರ್ತೆ ಯಾದಗಿರಿ
ಭಾರತ ಸರ್ಕಾರದ ವಾರ್ತಾ ಶಾಖೆ (ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ) ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ)., ಕರ್ನಾಟಕ ಕಾರ್ಯನಿರತ ಪತ್ರಿಕೆಗಳ ಸಂಪಾದಕರ ಸಂಘ (ರಿ). ಜಿಲ್ಲಾ ಘಟಕ ಯಾದಗಿರಿ, ಇವರ ಸಂಯುಕ್ತಾಶ್ರಯದಲ್ಲಿ ಇದೇ ಆ.29 ಶುಕ್ರವಾರದಂದು ಯಾದಗಿರಿಯ ಎಸ್. ಡಿ. ಎನ್ ಹೋಟೆಲ್‌ನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ "ವಾರ್ತಾಲಾಪ ಕಾರ್ಯಾಗಾರ " ಆಯೋಜಿಸಲಾಗಿದೆ.ಕರ್ನಾಟಕ ಸರ್ಕಾರದ ಮಾನ್ಯ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಯಾದಗಿರಿ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಸೇರಿದಂತೆ ಮುಂತಾದವರು ಉಪಸ್ಥಿತರಿರಲಿದ್ದಾರೆ.
ರಾಯಚೂರು ಸಂಸದ ಜಿ. ಕುಮಾರ ನಾಯಕ ಹಾಗೂ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಡಾ. ಬಿ. ಜಿ. ಪಾಟೀಲ, ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ನಗರಸಭೆಯ ಅಧ್ಯಕ್ಷ ಕು. ಲಲಿತಾ ಅನಪೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬೂರಾವ್ ಕಾಡ್ಲೂರ, ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕರಾದ ಎಸ್.ಜಿ. ರವೀಂದ್ರ, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಜಿಪಂ ಸಿಇಒ ಲವೀಶ್ ಒರಡಿಯಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ (ಹೆ. ಪ್ರ.) ಸುಲೈಮಾನ್ ಡಿ. ನದಾಫ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ಮಲ್ಲಪ್ಪ ಸಂಕೀನ್, ಕರ್ನಾಟಕ ಕಾರ್ಯನಿರತ ಪತ್ರಿಕೆಗಳ ಸಂಪಾದಕರ ಸಂಘ (ರಿ). ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಸಿದ್ದಪ್ಪ ಲಿಂಗೇರಿ ಅವರುಗಳು ಭಾಗವಹಿಸಲಿದ್ದಾರೆ.ಕಾರ್ಯಾಗಾರದ ಮೊದಲ ಅಧಿವೇಶನದಲ್ಲಿ ‘ಮಹತ್ವಾಕಾಂಕ್ಷೆ ಜಿಲ್ಲೆಯ ಪ್ರಾಮುಖ್ಯತೆ ಮತ್ತು ಉದ್ದೇಶ’ ವಿಷಯದ ಕುರಿತು ಜಿಪಂ ಸಿಇಒ ಲವೀಶ್ ಒರಡಿಯಾ ಅವರು ಮಾತನಾಡಲಿದ್ದಾರೆ.
‘ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ, 2023ರ ಕುರಿತು ಸುರಪುರದ ಉಪ ಪೊಲೀಸ್ ಅಧೀಕ್ಷಕರಾದ ಜಾವೇದ್ ಇನಾಂದಾರ್ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನದ ಕುರಿತು ಎಸ್ ಬಿ ಐ ಹಾಗೂ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ವ್ಯವಸ್ಥಾಪಕ ಭೀಮರಾವ್ ಪಂಚಾಳ, ಕೃಷಿ ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನದ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರತೇಂದ್ರನಾಥ ಸೂಗೂರ ಅವರು ಮಾತನಾಡಲಿದ್ದಾರೆ.ಮಧ್ಯಾಹ್ನದ ಎರಡನೇ ಅಧಿವೇಶನದಲ್ಲಿ, ಉದ್ಯೋಗ ಆಧಾರಿತ ಪ್ರೋತ್ಸಾಹಧನ (ELI) ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಪ್ರಚಾರ ಯೋಜನೆ (SPREE) ವಿಷಯದ ಕುರಿತು ಕಲಬುರಗಿಯ ಇ.ಎಸ್.ಐ.ಸಿ ಜಂಟಿ ನಿರ್ದೇಶಕರಾದ ಯುವರಾಜ್ ಎಸ್.ವಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ್ ಬಿರಾದಾರ್ ಅವರು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಣ ಪಿ. ಸಿರಸಿಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ನಿರ್ಮಲಾ ಹಾಗೂ ಯುವ ಸಬಲೀಕರಣ-ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಕಲಬುರಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಮಯೂರ್ ಕುಮಾರ್ ಮಾತನಾಡಲಿದ್ದಾರೆ.