ಸಾರಾಂಶ
ಉಪಚುನಾವಣೆಗೂ ಮುನ್ನ ಸಿ.ಪಿ.ಯೋಗೇಶ್ವರ್ ಗೆಲುವಿಗಾಗಿ ಹರಕೆ ಹೊತ್ತಿದ್ದ ಅವರ ಅಭಿಮಾನಿಗಳು ಸಿಪಿವೈ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಡೆಯ ಕಾರ್ತಿಕ ಸೋಮವಾರದ ದಿನ ಕೆಂಗಲ್ ಆಂಜನೇಯ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ೧೦೦೧ ಈಡುಗಾಯಿ ಒಡೆದು ಹರಕೆ ತೀರಿಸಿದರು.
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ೧೦೦೧ ಈಡುಗಾಯಿ ಒಡೆದು ಹರಕೆ ತೀರಿಸಿದರು. ಉಪಚುನಾವಣೆಗೂ ಮುನ್ನ ಸಿ.ಪಿ.ಯೋಗೇಶ್ವರ್ ಗೆಲುವಿಗಾಗಿ ಹರಕೆ ಹೊತ್ತಿದ್ದ ಅವರ ಅಭಿಮಾನಿಗಳು ಸಿಪಿವೈ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಡೆಯ ಕಾರ್ತಿಕ ಸೋಮವಾರದ ದಿನ ಕೆಂಗಲ್ ಆಂಜನೇಯ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ೧೦೦೧ ಈಡುಗಾಯಿ ಒಡೆದು ಹರಕೆ ತೀರಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ವಿ.ಬಿ.ಚಂದ್ರು, ಶಿವಕುಮಾರ್, ಜಯಕುಮಾರ್ (ಜೆಕೆ), ಕೋಟೆ ಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.