ಸಾರಾಂಶ
ಇವರು ಮದುವೆ ಸಮಾರಂಭಕ್ಕೆಂದು ಸಾಂಗ್ಲಿಯ ತಾಸಗಾಂವ್ ತಾಲೂಕಿನ ಸವರ್ಡೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಕನ್ನಡಪ್ರಭ ವಾರ್ತೆ ಸಾವಳಗಿ
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜಂಭುಲ್ವಾಡಿ ಪ್ರದೇಶದಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಐವರು ಸಾವೀಗಿಡಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ.ಜಮಖಂಡಿ ತಾಲೂಕಿನ ಅನುಸೂಯಾ ವಿಠ್ಠಲ ಮೋರೆ (60), ರೇಹಮತಪೂರ ಗ್ರಾಮದ ಭಾಗ್ಯಶ್ರೀ ಸಂತೋಷ ಅಂಬೇಕರ (16), ನಿವೇದಿತಾ ಮುಧೋಳ (21) ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ 8 ಜನರು ಮೀರಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಮದುವೆ ಸಮಾರಂಭಕ್ಕೆಂದು ಸಾಂಗ್ಲಿಯ ತಾಸಗಾಂವ್ ತಾಲೂಕಿನ ಸವರ್ಡೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.