ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಭೇಟಿ

| Published : May 19 2025, 02:21 AM IST

ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್‌ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡಸಿ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿನಿಯರ ಕೋರಿಕೆಗೆ ಮೇರಿಗೆ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವತ್ತಿರುವ ಕೋರ್ಸ್‌ಗಳಿಗೆ ಸಂಬಂದಿಸಿದ ಪುಸ್ತಕಗಳನ್ನು ಒದಗಿಸುವಂತೆ ಸೂಚಿಸಿದರು. ವಿದ್ಯಾರ್ಥಿನಿಯರು ಸರ್ಕಾರದ ಈ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ತಮ್ಮ ಗುರಿ ಸಾಧಿಸಿ,ಸ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ತಿಳಿಸಿದರು.

ಹಾಸನ: ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್‌ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡಸಿ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಪ್ರಮಾಣದಲ್ಲಿ ತರಕಾರಿ ಮತ್ತು ಬೇಳೆಕಾಳುಗಳನ್ನು ಬಳಸಬೇಕು ಜೊತೆಗೆ ಗುಣಮಟ್ಟ ಹಾಗೂ ರುಚಿಕರವಾಗಿ ಆಹಾರ ಸಿದ್ಧಡಿಸಲು ನಿಗಾ ವಹಿಸಿ ಕ್ರಮಕೈಗೊಳ್ಳಲು ಸೂಚಿಸಿದರು. ವಾರಕ್ಕೊಮ್ಮೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ವಸತಿ ನಿಲಯಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸುವುದರ ಜೊತೆಗೆ ಮಕ್ಕಳೊಂದಿಗೆ ಊಟ ಮಾಡಲು ಸೂಚಿಸಿದರು. ಮಕ್ಕಳ ಮೇಲೆ ಕಾಳಜಿವಹಿಸಿ ಕರ್ತವ್ಯ ನಿರ್ವಹಿಸುತ್ತಿಲ್ಲದ ಕಾರಣ ವಸತಿ ನಿಲಯದ ನಿಲಯ ಪಾಲಕರು ಹಾಗೂ ಅಡುಗೆ ಸಿಬ್ಬಂದಿಯನ್ನು ಬದಲಾವಣೆ ಮಾಡುವಂತೆ ಸೂಚಿಸಿದರು. ವಿದ್ಯಾರ್ಥಿ ನಿಲಯದಲ್ಲಿ ೨೦ ಕಂಪ್ಯೂಟರ್‌ಗಳಿದ್ದು ಅವುಗಳನ್ನು ಬಳಕೆ ಮಾಡಲು ನೀಡುತ್ತಿಲ್ಲ ವಿದ್ಯಾರ್ಥಿನಿಯರು ಸಮಸ್ಯೆಗೆ ತಿಳಿಸಿದ್ದಾಗ ಕೂಡಲೇ ಇಂಟರ್‌ನೆಟ್ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಬಳಕೆಗೆ ನೀಡಲು ತಿಳಿಸಿದರು.ವಿದ್ಯಾರ್ಥಿನಿಯರ ಕೋರಿಕೆಗೆ ಮೇರಿಗೆ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವತ್ತಿರುವ ಕೋರ್ಸ್‌ಗಳಿಗೆ ಸಂಬಂದಿಸಿದ ಪುಸ್ತಕಗಳನ್ನು ಒದಗಿಸುವಂತೆ ಸೂಚಿಸಿದರು. ವಿದ್ಯಾರ್ಥಿನಿಯರು ಸರ್ಕಾರದ ಈ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ತಮ್ಮ ಗುರಿ ಸಾಧಿಸಿ,ಸ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ತಿಳಿಸಿದರು.ಈ ವೇಳೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಾಕ್ಷಾಯಿಣಿ ಬಿ.ಕೆ. ಸಿವಿಲ್ ನ್ಯಾಯಾಧೀಶರು ಹಾಗೂ ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ ಪಾಟೀಲ್, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕ್ಷಕರಾದ ಸ್ನೇಹ ಹಾಜರಿದ್ದರು.18ಎಚ್ಎಸ್ಎನ್9 :