ಅಂಗನವಾಡಿ ಮಕ್ಕಳಿಗೆ ಡೆಸ್ಕ್‌ ವ್ಯವಸ್ಥೆ

| Published : Feb 09 2024, 01:48 AM IST

ಸಾರಾಂಶ

ಅಂಗನವಾಡಿ ಮಕ್ಕಳು ಶಾಲೆಗಳಲ್ಲಿ ಇರುವುದರಿಂದ ಶಾಲೆಯ ವಾತಾವರಣದಲ್ಲಿ ಬೇಗ ಬೆರೆಯುತ್ತವೆ. ಅಂಗನವಾಡಿ ಕಟ್ಟಡಗಳು ಮೂಲಭೂತ ಸೌಕರ್ಯಗಳಿಂದ ವಂಚಿತ ಆಗಬಾರದು. ಕಡ್ಡಾಯವಾಗಿ ಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಗಾಳಿ, ಬೆಳಕು, ಶುದ್ಧ ನೀರು ಒದಗಿಸಬೇಕು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಕುಳಿತುಕೊಳ್ಳಲು ಡೆಸ್ಕ್ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚನೆ ನೀಡಿದರು.

ಶಿವಾಜಿ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅಂಗನವಾಡಿ ಕಟ್ಟಡಗಳ ದುರಸ್ಥಿ, ಪುನರ್ ನಿರ್ಮಾಣ ಹಾಗೂ ಸುಸ್ಥಿತಿಯಲ್ಲಿರುವ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದ ಅವರು, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದು ಸೂಚಿಸಿದರು.

ಅಂಗನವಾಡಿ ಮಕ್ಕಳು ಶಾಲೆಗಳಲ್ಲಿ ಇರುವುದರಿಂದ ಶಾಲೆಯ ವಾತಾವರಣದಲ್ಲಿ ಬೇಗ ಬೆರೆಯುತ್ತವೆ. ಅಂಗನವಾಡಿ ಕಟ್ಟಡಗಳು ಮೂಲಭೂತ ಸೌಕರ್ಯಗಳಿಂದ ವಂಚಿತ ಆಗಬಾರದು. ಕಡ್ಡಾಯವಾಗಿ ಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಗಾಳಿ, ಬೆಳಕು, ಶುದ್ಧ ನೀರು ಒದಗಿಸುವಂತೆ ಸೂಚಿಸಿದರು.

ಪ್ರತಿ 3 ತಿಂಗಳಿಗೊಮ್ಮೆ ಅಂಗನವಾಡಿ ಕೇಂದ್ರಗಳಿಗೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ತಪಾಸಣೆ ನಡೆಸಬೇಕು. ತೂಕ ಕಡಿಮೆ ಸೇರಿದಂತೆ ಯಾವುದೇ ಆರೋಗ್ಯದ ಸಮಸ್ಯೆ ಕಂಡು ಬಂದರೆ ಚಿಕಿತ್ಸೆ ನೀಡಬೇಕು ಹಾಗೂ ಅಪೌಷ್ಠಿಕತೆ ಇರುವ ಮಕ್ಕಳನ್ನು ಎನ್‌ಆರ್‌ಸಿ, ಎಂಎನ್‌ಆರ್‌ಸಿಗೆ ಕಳುಹಿಸಿ ಚಿಕಿತ್ಸೆ ಕೊಡಿಸಲು ನಿರ್ದೇಶನ ನೀಡಿದರು.

ಪ್ರತಿ ತಿಂಗಳು 3ನೇ ಶನಿವಾರ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಬಾಲವಿಕಾಸ ಸಲಹಾ ಸಮಿತಿ ಸಭೆ ಏರ್ಪಡಿಸಬೇಕು. ಈ ಸಭೆಯಲ್ಲಿ ಗರ್ಭಿಣಿ, ಬಾಣಂತಿಯರಿಗೆ ಸಭೆಯಲ್ಲಿ ಹಾಜರಿರಲು ತಿಳಿಸಿ ಇಲಾಖೆಯ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಅಂಗನವಾಡಿ ಕೇಂದ್ರಗಳ ಮಕ್ಕಳನ್ನು ಶಾಲಾ ಪೂರ್ವ ಶಿಕ್ಷಣ ಮುಗಿದ ನಂತರ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹೋಗುವಂತೆ ಎಲ್ಲ ಕಾರ್ಯಕರ್ತೆಯರು ಹಾಗೂ ಮುಖ್ಯೋಪಾಧ್ಯಯರು ಪ್ರೇರೇಪಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಾತಿ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸಿಬ್ಬಂದಿ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ್ ಎ.ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರೇವತಿ ಹೊಸಮಠ, ಜಿಲ್ಲೆಯ ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಕೋಟ್: ಅಂಗನವಾಡಿ ಮಕ್ಕಳು ಶಾಲೆಗಳಲ್ಲಿ ಇರುವುದರಿಂದ ಶಾಲೆಯ ವಾತಾವರಣದಲ್ಲಿ ಬೇಗ ಬೆರೆಯುತ್ತವೆ. ಅಂಗನವಾಡಿ ಕಟ್ಟಡಗಳು ಮೂಲಭೂತ ಸೌಕರ್ಯಗಳಿಂದ ವಂಚಿತ ಆಗಬಾರದು. ಕಡ್ಡಾಯವಾಗಿ ಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಗಾಳಿ, ಬೆಳಕು, ಶುದ್ಧ ನೀರು ಒದಗಿಸಬೇಕು. ರಾಹುಲ ಶಿಂಧೆ. ಜಿಪಂ ಸಿಇಒ