ಸಾರಾಂಶ
ರಾಜ್ಯದಲ್ಲಿ ಶೇ.75ರಷ್ಟು ಅಹಿಂದ ಜನರಿದ್ದರೂ ಅವರ ಮೇಲೆ ಶೋಷಣೆ ಮೊದಲಿನಿಂದಲೂ ನಡೆಯುತ್ತಲೇ ಇತ್ತು. ಅದಕ್ಕಾಗಿಯೇ ದೇವರಾಜ ಅರಸು ಎಲ್ಲಾ ಜಾತಿಯವರಿಗೂ ಸಾಮಾಜಿಕ ನ್ಯಾಯ, ಸಮಾನತೆ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಮೀಸಲಾತಿ ಜಾರಿಗೊಳಿಸಿದರು.
ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ರಾಜಕೀಯ ರಂಗದಲ್ಲಿ ಸಾಕಷ್ಟು ಚತುರರಾಗಿದ್ದ ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಹಿಂದುಳಿದವರ ಕಲ್ಯಾಣಕ್ಕಾಗಿ ಆಯೋಗವನ್ನು ರಚಿಸಿದರು. ಭೂಸುಧಾರಣೆ ನೀತಿಯನ್ನು ಜಾರಿಗೆ ತಂದು ಬಡವರ, ದೀನ ದಲಿತರ ಉದ್ಧಾರಕ್ಕಾಗಿ ಶ್ರಮಿಸಿದವರು ಎಂದು ಶಾಸಕ ಬಿ.ಎನ್ ರವಿಕುಮಾರ್ ಹೇಳಿದರು. ನಗರದ ತಾಲೂಕು ಕಚೇರಿಯಲ್ಲಿ ತಾಲ್ಲೂಕು ಪಂಚಾಯತಿ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶಿಡ್ಲಘಟ್ಟ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಸಾಮಾಜಿಕ ನ್ಯಾಯ ಕಲ್ಪಿಸಿದ ಅರಸುರಾಜ್ಯದಲ್ಲಿ ಶೇ.75ರಷ್ಟು ಅಹಿಂದ ಜನರಿದ್ದರೂ ಅವರ ಮೇಲೆ ಶೋಷಣೆ ಮೊದಲಿನಿಂದಲೂ ನಡೆಯುತ್ತಲೇ ಇತ್ತು. ಅದಕ್ಕಾಗಿಯೇ ಅರಸು ಎಲ್ಲಾ ಜಾತಿಯವರಿಗೂ ಸಾಮಾಜಿಕ ನ್ಯಾಯ, ಸಮಾನತೆ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಮೀಸಲಾತಿ ಜಾರಿಗೊಳಿಸಿದರು. ಹಿಂದುಳಿದ ಸಮಾಜಗಳ ಅಭಿವೃದ್ಧಿಗೆ ಒತ್ತು ನೀಡಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಸೇವೆಯನ್ನು ನಾಡುವ ಮರೆಯುವಂತಿಲ್ಲ ಎಂದರು.
ಬಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ತಹಸೀಲ್ದಾರ್ ಬಿ. ಎನ್. ಸ್ವಾಮಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ದಿ ಡಿ. ದೇವರಾಜ ಅರಸು ಧ್ವನಿ ಇಲ್ಲದವರ ಪಾಲಿಗೆ ಧ್ವನಿಯಾಗಿದ್ದರು. ಅವರ ಸಮಾಜಮುಖೀ ಕೆಲಸಗಳು, ಪ್ರಗತಿಪರ ಯೋಜನೆಗಳು ಅವಿಸ್ಮರಣೀಯವಾಗಿದ್ದವು. ಮೊಟ್ಟ ಮೊದಲ ಬಾರಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ಪ್ರಾರಂಭಿಸಿದರು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹೇಮಾವತಿ ಆರ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ರಾಮಚಂದ್ರಪ್ಪ, ಪೌರಾಯುಕ್ತ ಮಂಜುನಾಥ್, ಬಿ.ಇ.ಒ ನರೇಂದ್ರಕುಮಾರ್, ತಾದೂರು ರಘು, ಡಾಲ್ಫಿನ್ ನಾಗರಾಜು, ತಾಲ್ಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮೂರ್ತಿ, ಸಿಡಿಪಿಒ ವಿದ್ಯಾ ವಸ್ತ್ರದ್, ಸಮಾಜ ಕಲ್ಯಾಣ ಇಲಾಖೆ ಜಗದೀಶ್, ಕೃಷಿ ಇಲಾಖೆ ರವಿ, ಅರಣ್ಯ ಇಲಾಖೆ ರಾಕೇಶ್, ಬಿಸಿಎಂ ಅಧಿಕಾರಿ ಬೀರೇಗೌಡ, ಲೋಕೋಪಯೋಗಿ ಇಲಾಖೆಯ ಶ್ರೀನಿವಾಸ್, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಮೇಲೂರು ಮಂಜುನಾಥ ಪಾಲ್ಗೊಂಡಿದ್ದರು.