ಸಾರಾಂಶ
ಹಾಸನದ ತಣ್ಣೀರುಹಳ್ಳಮಠದ ಶ್ರೀ ಸಿದ್ದೇಶ್ವರ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಕಾರ್ಯಕ್ರಮ ನಡೆಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 110 ವರ್ಷದ ಜಯಂತಿ ಪ್ರಯುಕ್ತ ತಣ್ಣಿರುಹಳ್ಳಮಠದ ಶ್ರೀ, ಶ್ರೀ ಶಿವಲಿಂಗ ಮಹಾಸ್ವಾಮೀಜಿಯವರ ದತ್ತಿ ಹಾಗೂ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಚನ ಪುಸ್ತಕಗಳನ್ನು ನೀಡಲಾಯಿತು. ಶಿವಲಿಂಗ ಮಹಾಸ್ವಾಮೀಜಿಯವರ ದತ್ತಿ ಹಾಗೂ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಚನ ಪುಸ್ತಕಗಳನ್ನು ನೀಡಲಾಯಿತು.
ಹಾಸನ: ತಣ್ಣೀರುಹಳ್ಳಮಠದ ಶ್ರೀ ಸಿದ್ದೇಶ್ವರ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಕಾರ್ಯಕ್ರಮ ನಡೆಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 110 ವರ್ಷದ ಜಯಂತಿ ಪ್ರಯುಕ್ತ ತಣ್ಣಿರುಹಳ್ಳಮಠದ ಶ್ರೀ, ಶ್ರೀ ಶಿವಲಿಂಗ ಮಹಾಸ್ವಾಮೀಜಿಯವರ ದತ್ತಿ ಹಾಗೂ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಚನ ಪುಸ್ತಕಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ತಣ್ಣಿರುಹಳ್ಳಮಠದ ಶ್ರೀ ವಿಜಯಕುಮಾರ ಸ್ವಾಮೀಜಿಯವರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕದ ನೂತನ ಪ್ರಧಾನ ಕಾರ್ಯದರ್ಶಿ ರಾಮನಾಥಪುರದ ಅರ್.ಕೆ. ಶ್ರೀನಿವಾಸ್ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ತಾಲ್ಲೂಕು ಅಧ್ಯಕ್ಷರು ಪುಟ್ಟರಾಜ, ವಿದ್ಯಾಸಂಸ್ಥೆ ನಿರ್ದೇಶಕರು ಸೋಮಣ್ಣ, ಸಾಹಿತಿಗಳು ಬಿ.ಅರ್ ಪಂಚಾಕ್ಷರಿ ಮುಂತಾದವರಿದ್ದರು.