ಸಾರಾಂಶ
ಬೆಳಗಾವಿ: ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗೆ ಬುಧವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ದಿಢೀರ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ಒಪಿಡಿ ವಾರ್ಡ, ಹೆರಿಗೆ ವಾರ್ಡ, ಎಂಆರ್‌ಐ ಸ್ಕ್ಯಾನಿಂಗ್ ಸೆಂಟರ್, ಫಾರ್ಮರ್ಸಿ, ಎಮರ್ಜೆನ್ಸಿವಾರ್ಡಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ವೈದ್ಯರು ಮತ್ತು ಸಿಬ್ಬಂದಿ ಹಾಜರಾತಿ, ಸೌಲಭ್ಯಗಳು ಹಾಗೂ ಹಾಸಿಗೆಗಳನ್ನು ಪರಿಶೀಲಿಸಿದರು. ಬಳಿಕ ಶಿವಾಜಿ ನಗರದಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಿಮ್ಸ್ ಆಸ್ಪತ್ರೆಯಲ್ಲಿರುವ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲಾಗುವುದು ಎಂದು ಅಂಜುಂ ಪರ್ವೇಜ್ ಸುದ್ದಿಗಾರರಿಗೆ ತಿಳಿಸಿದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶಕೋಣಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ಡಾ.ಅಣ್ಣಾಸಾಹೇಬ ಪಾಟೀಲ ಮೊದಲಾದವರು ಇದ್ದರು.