ಸಾರಾಂಶ
ಮಕ್ಕಳು ದೇವರ ಸಮಾನ. ಮಕ್ಕಳಲ್ಲಿ ಬೇಧ - ಭಾವ ಮಾಡದೇ ಎಲ್ಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಆರೈಕೆ ಮಾಡಬೇಕು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರ ಮಕ್ಕಳನ್ನು ಕೂಸಿನ ಮನೆಗಳಲ್ಲಿ ಪಾಲನೆ ಮಾಡಬೇಕಾಗಿದೆ. ಹಾಗಾಗಿ ಇಲ್ಲಿ ತರಬೇತಿ ಪಡೆದು ಕೂಸಿನ ಮನೆಗಳನ್ನು ಯಶಸ್ವಿಯಾಗಿ ಮುನ್ನಡೆಸಬೇಕು ಎಂದು ಉದ್ಯೋಗ ಖಾತರಿ ಯೋಜನೆ ಸಹಾಯಕ ನಿರ್ದೇಶಕ ಪಿ.ಲಕ್ಷ್ಮೀನಾರಾಯಣ ಹೇಳಿದರು.ತಾ.ಪಂ ಸಭಾಭವನದಲ್ಲಿ ಒಂದು ವಾರ ಏರ್ಪಡಿಸಿರುವ ಕೂಸಿನ ಮನೆ ಆರೈಕೆದಾರರ ತರಬೇತಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.ತಾಂತ್ರಿಕ ಸಂಯೋಜಕ ಅರ್ಷದ ನೇರ್ಲಿ ಮಾತನಾಡಿ, ಮಕ್ಕಳು ದೇವರ ಸಮಾನ. ಮಕ್ಕಳಲ್ಲಿ ಬೇಧ - ಭಾವ ಮಾಡದೇ ಎಲ್ಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಆರೈಕೆ ಮಾಡಬೇಕು ಎಂದರು. ಅಂಗನವಾಡಿ ಮೇಲ್ವಿಚಾರಕಿಯ ಶೋಭಾ ಬಸ್ತವಾಡೆ, ಶೈಲಾ ಪಾಟೀಲ ತರಬೇತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂಐಎಸ್ ಸಂಯೋಜಕ ಶಂಕರ ಶಿರಗುಪ್ಪಿ, ಐಇಸಿ ತಾಲೂಕು ಸಂಯೋಜಕ ಮಹಾಂತೇಶ ಬಾದವನಮಠ, ಆಡಳಿತ ಸಹಾಯಕಿ ಪ್ರೀತಿ ಜವಳಿ ಹಾಜರಿದ್ದರು. ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಮೈಸೂರಿನ ಅಬ್ದುಲ್ ನಜೀರ್‌ಸಾಬ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಂಸ್ಥೆ, ಜಿ.ಪಂ ಹಾಗೂ ತಾ.ಪಂ ಸಹಯೋಗದಲ್ಲಿ ಈ ತರಬೇತಿ ಏರ್ಪಡಿಸಲಾಗಿದೆ.