ಮೇವು, ನೀರು ಕೊರತೆಯಾಗದಂತೆ ನಿಗಾವಹಿಸಿ

| Published : Feb 04 2024, 01:34 AM IST / Updated: Feb 04 2024, 01:35 AM IST

ಸಾರಾಂಶ

ಈಗಾಗಲೇ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆ ಕಾಣುತ್ತಿದ್ದು, ಮುಂಬರುವ ಬೇಸಿಗೆಯಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೀರಿನ ಪೂರೈಕೆ ಮಾಡಬೇಕು. ಜಾನುವಾರುಗಳಿಗೆ ಪ್ರತಿ ಗ್ರಾಮದಲ್ಲಿ ಮೇವು ಪೂರೈಕೆಯಾಗುವಂತೆ ನೋಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಕಾಗವಾಡ

ತಾಲೂಕನ್ನು ಸರ್ಕಾರ ಈಗಾಗಲೇ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬೇಸಿಗೆ ಪ್ರಾರಂಭವಾಗಿದ್ದು ಜನ - ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸೇರಿದಂತೆ ಯಾವುದೇ ಕೊರತೆಯಾಗದಂತೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಎಂದು ಕಾಗವಾಡ ಶಾಸಕ ಹಾಗೂ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಶನಿವಾರ ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬರಗಾಲ ಎದುರಿಸುವ ಕುರಿತು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆ ಕಾಣುತ್ತಿದ್ದು, ಮುಂಬರುವ ಬೇಸಿಗೆಯಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೀರಿನ ಪೂರೈಕೆ ಮಾಡಬೇಕು. ಜಾನುವಾರುಗಳಿಗೆ ಪ್ರತಿ ಗ್ರಾಮದಲ್ಲಿ ಮೇವು ಪೂರೈಕೆಯಾಗುವಂತೆ ನೋಡಬೇಕು ಎಂದರು.

ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಕೊಳವೆ ಬಾವಿಗಳಿಂದ ನೀರು ಪೂರೈಕೆಗೆ ತೊಂದರೆಯಾಗದಂತೆ ನಿಗಾವಹಿಸಬೇಕು. ಮತ್ತು ಅವಶ್ಯಕತೆ ಇದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುಬೇಕು. ಹೊಸ ಟ್ಯಾಂಕರ್‌ಗಳನ್ನು ಖರೀದಿಗೆ ಪ್ರಸ್ತಾವನೆ ಸಲ್ಲಿಸಿ ಜನರಿಗೆ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಥಣಿ ಮತ್ತು ಕಾಗವಾಡ ತಾಲೂಕಿನ ಅಧಿಕಾರಿಗಳು ಉಪಸ್ಥಿತರಿದ್ದು, ನೀರಿನ ಪೂರೈಕೆ ಮತ್ತು ಜಾನುವಾರಗಳಿಗೆ ಮೇವಿನ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು.

ಬಾಕ್ಸ್

ಅಧಿಕಾರಿಗಳಿಗೆ ತರಾಟೆ:

ಬಹುಗ್ರಾಮ ಕುಡಿಯುವ ನೀರು ಸರಬರಾಜು ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಸಭೆಗೆ ಆಗಮಿಸಿದ‌ ಎಇಇ ರವೀಂದ್ರ ಮೂರಗಾಲಿ ತರಾಟೆಗೆ ತೆಗೆದುಕೊಂಡ ಶಾಸಕರು, ನಿಮಗೆ ಮಾಹಿತಿ ಇಲ್ಲ; ಬೇಕಾದರೆ ನಾನು ನಿಮಗೆ ಮಾಹಿತಿ ಕೊಡುತ್ತೇನೆ. ಆಫೀಸ್ ಬಿಟ್ಟು ಹಳ್ಳಿಗಳಿಗೆ ತೆರಳಿ ಮಾಹಿತ ತಯಾರಿಸಿ ವರದಿ ನೀಡುವಂತೆ ಸೂಚಿಸಿದರು, ತಾಲೂಕಿನ ಪಿಡಿಒಗಳು ಗ್ರಾಮ ಪಂಚಾಯತಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಸಾರ್ವಜನಿಕರಿಂದ ಆರೋಪ ಕೇಳಿಬರುತ್ತಿವೆ ಇದು ಸುಧಾರಣೆ ಕಾಣಬೇಕು ಹೀಗೆ ಮುಂದುವರೆದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಈ ಸಮಯದಲ್ಲಿ ತಹಸೀಲ್ದಾರ ರಾಜೇಶ ಬುರ್ಲಿ, ಅಧಿಕಾರಿಗಳಾದ ಪ್ರವೀಣ ಪಾಟೀಲ, ಎಂ‌ ಆರ್ ಮುಂಜೆ, ಸಂಜೀವಕುಮಾರ ಸದಲಗಿ, ಈರಣ್ಣ ವಾಲಿ,ಡಿ ಜೆ ಕಾಂಬಳೆ,ಮಾಹಾಂತೇಶ ಕವಲಾಪೂರ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಇದ್ದರು.

ಕೋಟ್:

ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಕೊಳವೆ ಬಾವಿಗಳಿಂದ ನೀರು ಪೂರೈಕೆಗೆ ತೊಂದರೆಯಾಗದಂತೆ ನಿಗಾವಹಿಸಬೇಕು. ಮತ್ತು ಅವಶ್ಯಕತೆ ಇದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುಬೇಕು. ಹೊಸ ಟ್ಯಾಂಕರ್‌ಗಳನ್ನು ಖರೀದಿಗೆ ಪ್ರಸ್ತಾವನೆ ಸಲ್ಲಿಸಿ ಜನರಿಗೆ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಬೇಕು.

ರಾಜು ಕಾಗೆ. ಕಾಗವಾಡ ಶಾಸಕ ಹಾಗೂ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ