ಸಾರಾಂಶ
ತಂಬಾಕು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ತಾವು ಪ್ರಧಾನಿ ನರೇಂದ್ರ ಮೋದಿ ಮತ್ತು ವಾಣಿಜ್ಯ ಸಚಿವರೊಂಗೆ ಮಾತನಾಡಿ ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಹುಣಸೂರು
ತಂಬಾಕು ದರ ಕುಸಿತ ಕುರಿತಂತೆ ನವದೆಹಲಿಯಲ್ಲಿ ವಾಣಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ಶಾಸಕ ಜಿ.ಡಿ. ಹರೀಶ್ ಗೌಡ ನೇತೃತ್ವದ ರೈತಮುಖಂಡರ ನಿಯೋಗ ಪಾರ್ಲಿಮೆಂಟ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ತಂಬಾಕು ಬೆಳೆಗಾರರ ಸಮಸ್ಯೆಗಳ ಕುರಿತು ಮಾಜಿ ಪ್ರಧಾನಿಗೆ ಶಾಸಕ ಜಿ.ಡಿ. ಹರೀಶ್ ಗೌಡ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಕೋರಿದರು.
ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ತಂಬಾಕು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ತಾವು ಪ್ರಧಾನಿ ನರೇಂದ್ರ ಮೋದಿ ಮತ್ತು ವಾಣಿಜ್ಯ ಸಚಿವರೊಂಗೆ ಮಾತನಾಡಿ ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.ನಿಯೋಗದಲ್ಲಿ ಮೈಮುಲ್ ಮಾಜಿ ಅಧ್ಯಕ್ಷ ಪ್ರಸನ್ನ, ರೈತ ಮುಖಂಡರಾದ ಹೊಸೂರು ಕುಮಾರ್, ಉಂಡುವಾಡಿ ಸಿ. ಚಂದ್ರೇಗೌಡ, ಮೂರ್ತಿ ಇದ್ದರು.
ಇದಕ್ಕೂ ಮೊದಲು ಇದೇ ನಿಯೋಗವು ವಾಣಿಜ್ಯಸಚಿವರನ್ನು ಭೇಟಿ ಮಾಡಿತ್ತು. ಆಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೂಡ ಇದ್ದರು.